ರಾಮನಗರ: ಬೈಕಿಗೆ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ತಲೆಯ ಮೇಲೆ ಟಿಪ್ಪರ್ ಲಾರಿ ಹರಿದು ಹೋದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿ ಸಾಗರ್ ಮೃತ ದುರ್ದೈವಿ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುವಾಗ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಕನಕಪುರದ ವಾಣಿ ಥಿಯೇಟರ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಿಂದ ಕೆಳಗೆ ಬಿದ್ದ ಸಾಗರ್ ನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ. ಪರಿಣಾಮ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಸಂಬಂಧ ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.