ಕೊಡಗು: ರಾಜ್ಯ ಸರ್ಕಾರ ಆಯೋಜಿಸಿರುವ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಶನಿವಾರ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಕೊಡಗು ಬಂದ್‍ಗೆ ಕರೆ ನೀಡಿದೆ.
ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಖಾಸಗಿ ಬಸ್‍ಗಳು ರಸ್ತೆಗೆ ಇಳಿಯುವುದಿಲ್ಲವೆಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಹೇಳಿದ್ದಾರೆ.
Advertisement
Advertisement
ಇದಲ್ಲದೇ ಆಟೋ ಚಾಲಕ ಹಾಗೂ ಮಾಲೀಕರ ಸಂಘವು ಸಹ, ಮುನ್ನೆಚ್ಚರಿಕಾ ದೃಷ್ಟಿಯಿಂದ ಶನಿವಾರ ಆಟೋ ಓಡಾಟ ನಿಲ್ಲಿಸಲು ಸೂಚನೆ ನೀಡಿವೆ. ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಮೇದಪ್ಪ, ಸಂಘದ ಸೂಚನೆ ಮೇರೆಗೂ, ಯಾರಾದರೂ ಶನಿವಾರ ಆಟೋ ಓಡಿಸಿ ಚಾಲಕ ಹಾಗೂ ವಾಹನಕ್ಕೆ ಸಮಸ್ಯೆಯಾದರೆ ಸಂಘ ಹೊಣೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
ಕೊಡಗು ಬಂದ್‍ಗೆ ಚೇಂಬರ್ ಆಫ್ ಕಾಮರ್ಸ್ ತಟಸ್ಥ ನಿಲುವು ತೋರಿದೆ. ಅಲ್ಲದೇ ವರ್ತಕರು ತಮ್ಮ ಸುರಕ್ಷತೆ ನೋಡಿಕೊಳ್ಳುವಂತೆ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
ಬಂದ್ ಏಕೆ?
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಗೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ನಡುವೆಯೇ ಸಿದ್ದರಾಮಯ್ಯನವರು ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಈ ವೇಳೆ 2015ರ ನವೆಂಬರ್ 11ರಂದು ಮಡಿಕೇರಿಯಲ್ಲಿ ಟಿಪ್ಪು ಜಯಂತಿಯಂದು ನಡೆದ ಘರ್ಷಣೆಯ ವೇಳೆ ಕುಟ್ಟಪ್ಪ ಎಂಬವರು ಮೃತಪಟ್ಟಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿ ಪ್ರತಿ ಬಾರಿ ಟಿಪ್ಪು ಜಯಂತಿಗೆ ಭಾರೀ ವಿರೋಧ ವ್ಯಕ್ತವಾಗುತ್ತಲೇ ಇದೆ. ಆದರೆ ಈ ಬಾರಿಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್‍ಗೆ ಕರೆ ನೀಡಿದೆ.
ಟಿಪ್ಪು ಜಯಂತಿಗೆ ಪೊಲೀಸರ ಬಿಗಿ-ಭದ್ರತೆ:
ಗುರುವಾರ ಟಿಪ್ಪು ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನಾ ಡಿ ಪನ್ನೇಕರ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಹಾಗೂ ವಿರಾಜಪೇಟೆಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಯಿಂದ ಕಿಡಿಗೇಡಿಗಳು ಬಾರದಂತೆ 10 ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದೆ. ಇದಲ್ಲದೇ ಆಂತರಿಕ ತಪಾಸಣೆಗಾಗಿ 30 ಚೆಕ್ ಪೋಸ್ಟ್ ಗಳನ್ನು ಆರಂಭಿಸಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಂತ 10 ಕೆಎಸ್ಆರ್‌ಪಿ ತುಕಡಿ, ಒಂದು ವಜ್ರ ಪಡೆ ಕಾರ್ಯ ನಿರ್ವಹಿಸುತ್ತಿದೆ. ಭದ್ರತೆಗಾಗಿ ಒಟ್ಟು 2 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದಾರೆ. ಯಾರಾದರೂ ಕಾನೂನು ಉಲ್ಲಂಘನೆ ಮಾಡಿದರೆ, ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
ಪೊಲೀಸರು ಶುಕ್ರವಾರವೇ ಮಡಿಕೇರಿಯಲ್ಲಿ ಸಿವಿಲ್ ಪೊಲೀಸ್, ಕೆಎಸ್ಆರ್‌ಪಿ, ಜಿಲ್ಲಾ ಸಶಸ್ತ್ರ ತಂಡ ಹಾಗೂ ಆರ್‍ಎಎಫ್ ತಂಡಳಿಂದ ರೂಟ್ ಮಾರ್ಚ್ ಆರಂಭವಾಗಿದೆ. ಐಜಿಪಿ ಶರತ್ ಚಂದ್ರ ನೇತೃತ್ವದಲ್ಲಿ ರೂಟ್ ಮಾರ್ಚ್ ನಗರದ ಪ್ರತಿ ರಸ್ತೆಗಳಲ್ಲಿ ಸಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/