ನವದೆಹಲಿ: ತಿಪಟೂರು (Tiptur) ಕಾಂಗ್ರೆಸ್ ಶಾಸಕ ಷಡಕ್ಷರಿ (MLA Shadakshari) ಅವರು ಅಸ್ವಸ್ಥರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕರ್ನಾಟಕ ಭವನದಲ್ಲಿದ್ದಾಗ (Karnataka Bhavan) ದಿಢೀರ್ ಅಸ್ವಸ್ಥರಾಗಿದ್ದು, ಅಲ್ಲಿಯೇ ಇದ್ದ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಶಾಸಕ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್ ಕಾಲಿಗೆ ಗುಂಡೇಟು
ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಷಡಕ್ಷರಿ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದರು. ಈ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
