ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಸರ್ಕಾರ ಬೆದರಿತಾ ಎನ್ನುವ ಪ್ರಶ್ನೆ ಈಗ ಎದ್ದಿದೆ.
ಹೌದು. ಉತ್ತರ ಕನ್ನಡದ ಜಿಲ್ಲಾಡಳಿತ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯನ್ನು ಈಗ ಮುದ್ರಿಸದೇ ಇರುವ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಈ ಮೇಲಿನ ಪ್ರಶ್ನೆ ಎದ್ದಿದೆ.
Advertisement
Advertisement
ನವೆಂಬರ್ 10ರ ಟಿಪ್ಪು ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ತನ್ನ ಹೆಸರು ನಮೂದಿಸದಂತೆ ಅನಂತಕುಮಾರ್ ಹೆಗಡೆ ಆಪ್ತ ಸಹಾಯಕರ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ರಾಜ್ಯ ಸರ್ಕಾರ ಕೂಡ ಶಿಷ್ಟಾಚಾರದಲ್ಲಿ ಹೆಸರು ನಮೋದಿಸದಂತೆ ತೀರ್ಮಾನ ತೆಗೆದುಕೊಂಡಿತ್ತು. ಆದರೆ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳಿಗೆ ಶಿಷ್ಟಾಚಾರ ವಿಭಾಗದಿಂದ ಯಾವುದೇ ಪತ್ರ ಬಾರದ ಹಿನ್ನಲೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಣಕ್ಕೆ ಬ್ರೇಕ್ ಹಾಕಿದೆ.
Advertisement
ಇದನ್ನೂ ಓದಿ: ಆಹ್ವಾನಪತ್ರಿಕೆಯಲ್ಲಿ ಹೆಸರು ಹಾಕ್ಸೋದು ಪ್ರೋಟೋಕಾಲ್, ಬರೋದು ಬಿಡೋದು ಸಚಿವರಿಗೆ ಬಿಟ್ಟಿದ್ದು- ಸಿಎಂ
Advertisement
ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಪೇಚೆಗೆ ಸಿಲುಕಿದ್ದು, ಒಂದುವೇಳೆ ಯಾವುದೇ ಪ್ರತಿಕ್ರಿಯೆ ಬಾರದೇ ಹೆಸರು ನಮೋದಿಸದೇ ಇದ್ದಲ್ಲಿ ಹಕ್ಕುಚ್ಯುತಿ ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಗೊಂದಲ ಆಗದೇ ಇರಲು ಈಗ ಆಹ್ವಾನ ಪತ್ರಿಕೆಯನ್ನು ಮುದ್ರಿಸದೇ ಇರಲು ಜಿಲ್ಲಾಡಳಿತ ಮುಂದಾಗಿದೆ.
ಈ ಹಿಂದೆ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದ ಅನಂತ್ ಕುಮಾರ್ ಹೆಗಡೆ, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಬೇಡಿ. ಒಂದು ವೇಳೆ ಹೆಸರು ಪ್ರಕಟಿಸಿದರೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಟಿಪ್ಪುವಿನ ಜನ್ಮ ಜಾಲಾಡುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ್ದರೂ ಬೆಳಗಾವಿ ಜಿಲ್ಲಾಡಳಿತ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರ ಹೆಸರನ್ನು ಹಾಕಿ ಮುದ್ರಿಸಿದೆ.
ಇದನ್ನೂ ಓದಿ: ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ