ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

Public TV
1 Min Read
Tipu Sultan 1 1

ಲಂಡನ್: ಭಾರತದಿಂದ ಪಲಾಯನಗೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ (Vijay Mallya) ಕೊಂಡುಕೊಂಡಿದ್ದ ಟಿಪ್ಪು ಸುಲ್ತಾನ್‌ನ ಖಡ್ಗ (Tipu Sultan’s sword) 145 ಕೋಟಿ ರೂ.ಗೆ ಹರಾಜಾಗಿದೆ.

ಖಡ್ಗವನ್ನು ಲಂಡನ್‍ನಲ್ಲಿ ಬೋನ್‍ಹ್ಯಾಮ್ ಹರಾಜು ಸಂಸ್ಥೆ ಹರಾಜು ಹಾಕಿದ್ದು 145 ಕೋಟಿ ರೂ.ಗೆ ಬಿಡ್ ಆಗಿದೆ. ಗೌಪ್ಯತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಖಡ್ಗವನ್ನು ಖರೀದಿ ಮಾಡಿದ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಬೋನ್‍ಹ್ಯಾಮ್ ಹೌಸ್ ಸಂಯೋಜಕ ಎನ್ರಿಕಾ ಮೆಡುಗ್ನೊ ಹೇಳಿದ್ದಾರೆ. ಇದನ್ನೂ ಓದಿ: ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

Vijay Mallya

2004ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕಟ್ಟಿಕೊಂಡು ಸ್ಪರ್ಧೆಗೆ ಇಳಿದಿದ್ದ ಮಲ್ಯ, ಪ್ರಚಾರದ ತಂತ್ರವಾಗಿ ಖಡ್ಗವನ್ನು ಬಳಸಿಕೊಂಡಿದ್ದರು. ಆದರೆ ಅವರ ಸಮೇತ ಜನತಾ ಪಕ್ಷದ ಎಲ್ಲಾ ಅಭ್ಯರ್ಥಿಗಳು ಸೋಲು ಕಂಡಿದ್ದರು. ವಿಜಯ್ ಮಲ್ಯ ದಿವಾಳಿಯಾಗಿ ಭಾರತದಿಂದ ಪಲಾಯಾನಗೊಳ್ಳಲು ಈ ಖಡ್ಗ ಕಾರಣ ಎಂಬ ಮಾತು ಕೇಳಿ ಬಂದಿತ್ತು.

Tipu Sultan

2016ರಲ್ಲಿ ಲಂಡನ್ ಹೈಕೋರ್ಟ್ ಮೆಟ್ಟಿಲೇರಿದ್ದ ಭಾರತೀಯ ಬ್ಯಾಂಕ್‍ಗಳ ಒಕ್ಕೂಟವು ಮಲ್ಯ ಅವರ ಯಾವುದೇ ಚರ, ಸ್ಥಿರ ಆಸ್ತಿ ಮಾರಾಟ ಮಾಡದಂತೆ ನಿಬರ್ಂಧ ವಿಧಿಸಲು ಮನವಿ ಮಾಡಿದ್ದವು. ಈ ವೇಳೆ ಉತ್ತರ ನೀಡಿದ್ದ ಮಲ್ಯ, ನಮ್ಮ ಕುಟುಂಬಕ್ಕೆ ಕೇಡು ತಂದ ಖಡ್ಗವನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ್ದರು.

1799ರಲ್ಲಿ ನಡೆದ 4ನೇ ಆಂಗ್ಲೊ-ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ (Tipu Sultan) ಮರಣ ಹೊಂದಿದಾಗ ಅವರ ಅರಮನೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ತೆಗೆದುಕೊಂಡು ಹೋಗಿದ್ದ ಬ್ರಿಟಿಷ್ ಸೇನೆ ಮೆಜರ್ ಜನರಲ್ ಬೇರ್ಡೆಗೆ ಒಪ್ಪಿಸಿತ್ತು. ಬ್ರಿಟಿಷ್ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಟಿಪ್ಪು ಖಡ್ಗವನ್ನು 2004 ರಲ್ಲಿ ವಿಜಯ್ ಮಲ್ಯ 1.57 ಕೋಟಿ ರೂ.ಗೆ ಹರಾಜಿನಲ್ಲಿ ಖರೀದಿ ಮಾಡಿದ್ದರು. ಇದನ್ನೂ ಓದಿ: ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

Share This Article