ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ಅಪಘಾತದಲ್ಲಿ ಮೂವರು ಸಾವು

Public TV
1 Min Read
Nelamangala accident bengaluru

ಬೆಂಗಳೂರು: ಚಲಿಸುತ್ತಿದ್ದ ಕಾರಿನ (Car) ಟೈಯರ್ ಸ್ಫೋಟಗೊಂಡು (Tire Blast) ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.

ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: ಮಹಿಳಾ ಸಂಘಟನೆಯಲ್ಲಿ ಹೆಂಡತಿ ಬ್ಯುಸಿ – ಬೇಸತ್ತ ಪತಿಯಿಂದ ಪತ್ನಿ, ಅತ್ತೆಯ ಭೀಕರ ಹತ್ಯೆ

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ (Nelamangala) ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡದಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ!

Web Stories

Share This Article