ಬಳ್ಳಾರಿ: ಪತಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ, ಪ್ರೊಬೆಷನರಿ ಪಿಎಸ್ಐ (Probationary PSI) ನನ್ನು ಬಂಧಿಸಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದಲ್ಲಿ ನಡೆದಿದೆ.
ದೊರೆನಾಯ್ಕ್ ಬಂಧಿತ ಪ್ರೊಬೇಷನರಿ PSI. ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾದ ದೊರೆನಾಯ್ಕ್ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ PSI ಆಗಿ ಕೆಲಸ ಕರ್ತವ್ಯ ನಿರ್ವಹಿಸುತ್ತಿದ್ದ. ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ತನ್ನೂರು ಪೂಜಾರಹಳ್ಳಿ ತಾಂಡಾದ ಯುವತಿಯನ್ನು ಮೊದಲ ಮದುವೆಯಾಗಿದ್ದ ದೊರೆನಾಯ್ಕ್, ಆ ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಯುವತಿಯನ್ನ 2ನೇ ಮದುವೆಯಾಗಿದ್ದ. 2ನೇ ಪತ್ನಿ ಕೌಟುಂಬಿಕ ಕಲಹದಿಂದ ಬೆಸತ್ತು, ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ಪಿಎಸ್ಐ ಪತ್ನಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಹಗರಿಬೊಮ್ಮನ ಹಳ್ಳಿ ಪೊಲೀಸರು ಪ್ರೊಬೇಷನರಿ PSI ದೊರೆನಾಯ್ಕ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕ ಶಾಲೆಯಲ್ಲೇ ಕುಸಿದು ಬಿದ್ದರೂ ಆಸ್ಪತ್ರೆಗೆ ಕರೆದೊಯ್ಯದೇ ಗಂಟೆಗಟ್ಟಲೆ ನಿರ್ಲಕ್ಷ್ಯ? – ಸಿಸಿಟಿವಿಯಲ್ಲಿ ಸತ್ಯ ಬಯಲು
