ಬೆಳಗಾವಿ: ತಾಯಿ ಹಾಗೂ ಕರುಳ ಕುಡಿಯೊಂದು ಜೊತೆಯಾಗಿಯೇ ಆತ್ಮಹತ್ಯೆಗೆ(Suicide) ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ (Belagavi) ಪೀರನವಾಡಿಯಲ್ಲಿ ನಡೆದಿದೆ.
ಗಂಡನ ಮನೆಯವರ ತೀವ್ರ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ತಾಯಿ, ತನ್ನ ಮೂರು ವರ್ಷದ ಮಗನೊಂದಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.
ಪ್ರೇಮಾ ನಾಗೇಶ ತಳವಾರ (28) ಹಾಗೂ ಅವರ 3 ವರ್ಷದ ಪುತ್ರ ಭುವನ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇವರು ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದವಳನ್ನ ರಹಸ್ಯವಾಗಿಟ್ಟಿದ್ದ ಪತಿ – ಮನನೊಂದು ನವವಿವಾಹಿತೆ ಆತ್ಮಹತ್ಯೆ
ಘಟನೆ ತಿಳಿಯುತ್ತಿದ್ದಂತೆ ಮೃತ ಪ್ರೇಮಾ ಅವರ ಕುಟುಂಬಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಅತ್ತೆ ಸುಶೀಲಾ ತಳವಾರ, ಪತಿ ನಾಗೇಶ ತಳವಾರ, ಮೈದುನ ಪರಶುರಾಮ ತಳವಾರ, ನೆಗ್ಯಾನಿ (ನಾದಿನಿ) ಸಂಗೀತಾ ತಳವಾರ, ಮರೇವ್ವಾ ತಳವಾರ ಹಾಗೂ ಶಾರದಾ ಕಲಕಾಂವಕರ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು
ಸದ್ಯ ತಾಯಿ-ಮಗನ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಗೆ ರವಾನಿಸಲಾಗಿದ್ದು, ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
