ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ (Tirupati Tirumala Temple) ಮುಖ್ಯ ಗರ್ಭಗುಡಿಯನ್ನು (Sanctum) 2023ರ ಹೊಸ ವರ್ಷದಲ್ಲಿ ಕನಿಷ್ಠ 6 ರಿಂದ 8 ತಿಂಗಳು ಮುಚ್ಚುವ ಸಾಧ್ಯತೆಯಿದೆ.
ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ (ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು (Gold Plating) ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಬಂದ್ರೆ ಕ್ವಾರಂಟೈನ್
Advertisement
Advertisement
ನೂತನ ಚಿನ್ನದ ಲೇಪನ (Gold Plating) ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಫೆಬ್ರವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.
Advertisement
ಈ ಸಮಯದಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆಯೋದಕ್ಕಾಗಿ ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್- ಅಂಗಡಿಯಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯ
Advertisement
`ಆಗಮ ಶಾಸ್ತç’ ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಮೂಲ ದೇವಾಲಯವನ್ನು ಪುನಃಸ್ಥಾಪಿಸುವವರೆಗೆ, ಎಲ್ಲಾ ದೈನಂದಿನ ಆಚರಣೆಗಳನ್ನು ತಾತ್ಕಾಲಿಕ ದೇವಾಲಯದಲ್ಲಿ ಮಾಡಲಾಗುವುದು ಮತ್ತು ಭಕ್ತರಿಗೆ ದೇವರ ದರ್ಶನವನ್ನು ಇಲ್ಲೇ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.