ನವದೆಹಲಿ: ತಿರುಪತಿ ಲಡ್ಡು ವಿವಾದದ (Tirupati Laddoo Row) ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಲಡ್ಡುಗಳನ್ನು ತಯಾರಿಸಲು ತುಪ್ಪದ ಪೂರೈಕೆ ಮಾಡುತ್ತಿದ್ದ ಎಆರ್ ಡೈರಿಗೆ ಶೋಕಾಸ್ ನೋಟಿಸ್ ನೀಡಿದೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ರವಾನಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಡೈರಿ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ ಒಂದರಲ್ಲಿ ತುಪ್ಪದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿ ಕೊಬ್ಬು ಸೇರಿದೆ ಎಂದು ವರದಿ ನೀಡಿತ್ತು. ಇದನ್ನೂ ಓದಿ: ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ
ವಿವಾದದ ಬೆನ್ನಲ್ಲೇ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ಮೇಲೆ ದೇವಾಲಯದ ಮಂಡಳಿಯು ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್‍ನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಕಂಪನಿಯ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ಘೋಷಿಸಿದ್ದರು.
ತಮಿಳುನಾಡು ಮೂಲದ ಎಆರ್ ಡೈರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಲಬೆರಕೆ ಆರೋಪಗಳನ್ನು ಬಲವಾಗಿ ನಿರಾಕರಿಸಿದೆ. ದೇವಾಲಯಕ್ಕೆ ಪ್ರತಿ ದಿನ 10 ಟನ್ ತುಪ್ಪದ ಅವಶ್ಯಕತೆಯಿದೆ. ನಾವು 0.1% ಅಗತ್ಯವನ್ನು ಪೂರೈಸಿಲ್ಲ ಎಂದು ಹೇಳಿಕೊಂಡಿದೆ.
ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ, ಜಗನ್ ಮೋಹನ್ ರೆಡ್ಡಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ ತುಪ್ಪ ಬಳಕೆ ಮಾಡಲಾಗಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು