ತಿರುಪತಿ ತಿರುಮಲ ದೇವಸ್ಥಾನದಲ್ಲಿ (ಟಿಟಿಡಿ) ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬುದು ದೃಢವಾಗಿರುವುದು ವರದಿಗಳಿಂದ ತಿಳಿದುಬಂದಿದೆ. ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ (Tirupati Tirumala) ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಇಂದಿನಿಂದ (ಸೆ.22) 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ:ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ
Advertisement
ತಿರುಪತಿ ಲಡ್ಡು ವಿವಾದದ (Tirupati laddu Controversy) ಬಗ್ಗೆ ಎಕ್ಸ್‌ನಲ್ಲಿ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿ, ತಿರುಪತಿ ಲಡ್ಡು ಅಂದರೆ ಅಮೃತಕ್ಕೆ ಸಮನಾಗಿ ನೋಡುತ್ತೇವೆ. ತಿರುಮಲ ಲಡ್ಡು ಪ್ರಸಾದ ಅಶುದ್ಧವಾಗಿದೆ. ಈ ಪಾಪವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಿಂದೂ ಜನಾಂಗಕ್ಕೆ ಕಳಂಕ. ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬೆರಸಿರುವುದು ಗೊತ್ತಾದ ಕ್ಷಣವೇ ಬೆಚ್ಚಿಬಿದ್ದೆ. ತಪ್ಪಿತಸ್ಥ ಎಂಬ ಭಾವನೆ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.
Advertisement
ఏడుకొండలవాడా..! క్షమించు
•11 రోజులపాటు ప్రాయశ్చిత్త దీక్ష
అమృతతుల్యంగా… పరమ పవిత్రంగా భావించే తిరుమల లడ్డు ప్రసాదం- గత పాలకులు వికృత పోకడల ఫలితంగా అపవిత్రమైంది. జంతు అవశేషాలతో మాలిన్యమైంది. విశృంఖల మనస్కులే ఇటువంటి పాపానికి ఒడిగట్టగలరు. ఈ పాపాన్ని ఆదిలోనే పసిగట్టలేకపోవడం…
— Pawan Kalyan (@PawanKalyan) September 21, 2024
Advertisement
ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. 22 ಸೆಪ್ಟೆಂಬರ್ 2024ರಂದು ಅಂದರೆ ಭಾನುವಾರದ ಬೆಳಗ್ಗೆ ಗುಂಟೂರು ಜಿಲ್ಲೆಯ ನಂಬೂರಿನಲ್ಲಿ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಕ್ಷೆಯನ್ನು ಕೈಗೊಳ್ಳುತ್ತಿದ್ದೇನೆ. ಅಂದಿನಿಂದ 11 ದಿನಗಳ ಕಾಲವು ದೀಕ್ಷೆಯನ್ನು ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
Advertisement
ಇನ್ನೂ ಲಡ್ಡು ತಯಾರಿಯಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ ತುಪ್ಪವನ್ನು ಬಳಸಿದರೆಂಬ ವಿಚಾರವು ತಿಳಿದಾಗಿನಿಂದ ಎಲ್ಲರೂ ಕಂಗಾಲಾದರು. ಹಿಂದೂಧರ್ಮವನ್ನು ಅದರ ಸಂಸ್ಕೃತಿಯನ್ನು ಉದ್ದರಿಸಬೇಕಾದ ಕಾಲವಿದು. ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳಬೇಕಾದ ಕಾಲವಿದು. ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳೋಣ ಎಂದಿದ್ದಾರೆ. ಸನಾತನ ಧರ್ಮದ ಮೇಲೆ ದಾಳಿ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.