ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಸಿದ ಪ್ರಕರಣ (Tirupati Laddu row) ತನಿಖೆ ಆಗಲಿ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕವಾಗಿ ಪಾವಿತ್ರ್ಯ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ
ಮೊದಲೆಲ್ಲ ಕೆಎಂಎಫ್ ತಿರುಪತಿಗೆ ತುಪ್ಪ ಪೂರೈಸುತ್ತಿತ್ತು. ಆಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ. ಈ ಬಗ್ಗೆ ನಾನು ಕೆಎಂಎಫ್ ಅಧ್ಯಕ್ಷರ ಜೊತೆ ಕೂಡ ಮಾತನಾಡಿದ್ದೇನೆ. ಯಾರೇ ಆದರೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು. ಈ ಪ್ರಕರಣ ತನಿಖೆಯಾಗಲಿ ಎಂದು ಅವರು ಒತ್ತಾಯಿಸಿದರು. ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!