ಹೈದರಾಬಾದ್: ಜಗತ್ ಪ್ರಸಿದ್ಧ ತಿರುಮಲ ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದ ವಿಲೇವಾರಿಗಾಗಿ ಪರಿಸರ ಸ್ನೇಹಿ ಬ್ಯಾಗ್‍ಗಳನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಯಾರಿಸಿದೆ.
ಹೊಸ ಬ್ಯಾಗ್‍ಗಳಲ್ಲಿ ಲಡ್ಡು ವಿತರಿಸುವ ಕೌಂಟರ್‌ಅನ್ನು ನಿನ್ನೆ ಡಿಆರ್‌ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎಸ್ ಜವಾಹರ್ ರೆಡ್ಡಿ ಉದ್ಘಾಟಿಸಿದ್ದಾರೆ.
Advertisement
Advertisement
ಸಾಂಪ್ರದಾಯಿಕವಾಗಿ ಬಳಸಲಾಗುವ ಪ್ಲಾಸ್ಟಿಕ್ ಬ್ಯಾಗ್‍ಗಳು, ಪೆಟ್ರೋಕೆಮಿಕಲ್ಸ್‌ನಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಆರೋಗ್ಯಕ್ಕೆ ಹಾನಿಕಾರಕ. ಅಂಥ ಬ್ಯಾಗ್‍ಗಳು ಮಣ್ಣಿನಲ್ಲಿ ಕೊಳೆಯಲು 200ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಆದರೆ ಡಿಆರ್‌ಡಿಒ ತಯಾರಿಸಿರುವ ಬ್ಯಾಗ್‍ಗಳು, ಆರೋಗ್ಯಕ್ಕೆ ಹಾನಿಕಾರವಲ್ಲ. ಮಣ್ಣಿನಲ್ಲಿ ಬೇಗನೇ ಕೊಳೆಯುತ್ತವೆ. ಅಲ್ಲದೆ ಇವುಗಳ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ
Advertisement
Advertisement
ಮನುಕುಲದ ಉಳಿವಿಗೆ ಈ ರೀತಿಯ ಉತ್ಪನ್ನಗಳು ಅತ್ಯಗತ್ಯ. ಕೆಲವು ದಿನಗಳ ಕಾಲ ಯಾತ್ರಾರ್ಥಿಗಳ ಪ್ರತಿಕ್ರಿಯೆಯನ್ನು ಗಮನಿಸಿದ ನಂತರ ನಾವು ಅದರ ಮಾರಾಟವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ.