ತಿರುಪತಿ: ಕಾಲ್ತುಳಿತದಿಂದ (Tirupati Stampede) ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ (TTD) ಅವಕಾಶ ಮಾಡಿಕೊಟ್ಟಿದೆ.
ಸಿಎಂ ಚಂದ್ರಬಾಬು ನಾಯ್ಡು (CM Chandrababu Naidu) ಹಾಗೂ ಡಿಸಿಎಂ ಪವನ್ ಕಲ್ಯಾಣ್ (DCM Pawan Kalyan) ಸೂಚನೆ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
20 ಮಂದಿ ಗಾಯಾಳುಗಳುಗಳು ಸರ್ಕಾರಿ ಬಸ್ಸಿನಲ್ಲಿ ಆಸ್ಪತ್ರೆಯಿಂದ ದೇವಾಲಯಕ್ಕೆ ಪ್ರಯಾಣ ಮಾಡಿ ದೇವರ ದರ್ಶನ ಮಾಡಲಿದ್ದಾರೆ. ಇದನ್ನೂ ಓದಿ: Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?
ವೈಕುಂಠ ಏಕಾದಶಿ (Vaikuntha Ekadashi) ಹಿನ್ನೆಲೆಯಲ್ಲಿ ತಿರುಪತಿ ತಿರುಮಲಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಕಾಲ್ತುಳಿತದ ಬಳಿಕ ಎಚ್ಚೆತ್ತ ಆಂಧ್ರಪ್ರದೇಶ ಸರ್ಕಾರ ಹಾಗೂ ಟಿಟಿಡಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಿದೆ.
ತಿರುಪತಿಯಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಗಳ ತಲೆದಂಡವಾಗಿದೆ. ಡಿವೈಎಸ್‌ಪಿ ರಮಣಕುಮಾರ್ ಹಾಗೂ ಗೋಶಾಲೆ ಡಿಡಿ ಹರಿನಾಥ ರೆಡ್ಡಿ ಅವರನ್ನು ಆಂಧ್ರಪ್ರದೇಶ ಸರ್ಕಾರ ಅಮಾನತು ಮಾಡಿದೆ. ಎಸ್‌ಪಿ ಸುಬ್ಬರಾಯಡು ಹಾಗೂ ಇಓ ಗೌತಮಿ, ಸಿಎಸ್ ಓ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ವೈಕುಂಠ ಏಕಾದಶಿ ಪುರಾಣ ಕಥೆ ಏನು? ಯಾಕೆ ಆಚರಣೆ ಮಾಡುತ್ತಾರೆ?
ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಬ್ದಾರಿತನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ಮೇಲೆಯೇ ಸರ್ಕಾರ ಹೊಣೆ ಹೊರಿಸಿದೆ.
ಚಂದ್ರಬಾಬು ನಾಯ್ಡು ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಪ್ರಕಟಿಸಿದ್ದಾರೆ.