ಟೈಟಾನಿಕ್ (Titanic) , ಅವತಾರ್ (Avatar) ಚಿತ್ರದ ನಿರ್ಮಾಪಕ ಜಾನ್ ಲ್ಯಾಂಡೌ (Jon Landau) 63ನೇ ವಯಸ್ಸಿಗೆ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ನಿರ್ಮಾಪಕ ವಿಧಿವಶರಾಗಿದ್ದಾರೆ. ಅವರ ನಿಧನದ ಕುರಿತು ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ನನ್ನ ಜೀವನದ ಆಧಾರಸ್ತಂಭ- ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಲವ್ಲಿ ವಿಶ್
ಹಾಲಿವುಡ್‌ನಲ್ಲಿ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿರುವ ಜಾನ್ ಲ್ಯಾಂಡೌ ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ವಿರುದ್ಧ ಅವರು ಹೋರಾಡುತ್ತಿದ್ದರು. ಈಗ ಅವರ ನಿಧನದ ಸುದ್ದಿ ಕುಟುಂಬಕ್ಕೆ, ಆಪ್ತರಿಗೆ ಶಾಕ್ ಕೊಟ್ಟಿದೆ.
ಈಗ ಜಾನ್ ಲ್ಯಾಂಡೌ ನಿಧನದ ಸುದ್ದಿ ಕೇಳಿ ಹಾಲಿವುಡ್ (Hollywood) ಮಂದಿಗೆ ಆಘಾತವಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ನಟ, ನಟಿಯರು ಸಂತಾಪ ಸೂಚಿಸಿದ್ದಾರೆ.