ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ (Title) ರಿವೀಲ್ ಮಾಡಿದೆ. ನಿವೇದಿತಾ (Nivedita) ಮೊದಲ ಹೆಜ್ಜೆಗೆ ‘ಫೈರ್ ಫ್ಲೈ’ (Fire fly) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ (Vamshi) ಹೀರೋ. ನಿರ್ದೇಶನ ಕೂಡ ಅವರದ್ದೇ.
‘ಪಿ.ಆರ್.ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು, ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಇದನ್ನೂ ಓದಿ:ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ
ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ಶಿವರಾಜ್ ಕುಮಾರ್ (Shivaraj Kumar) ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಅಪ್ಪನ ಹಾದಿಯಲ್ಲೇ ನಿವೇದಿತಾ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.