ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ (Political Judgement) ಎಂದಿದ್ದ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ (TJ Abraham) ದೂರು ನೀಡಿದ್ದಾರೆ.
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ (Contempt of Court) ಪ್ರಕರಣ ದಾಖಲಿಸುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್
Advertisement
Advertisement
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.
Advertisement
ಈ ಆದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್. ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದಿದ್ದರು.
Advertisement