ನವದೆಹಲಿ: ಮಿಮಿಕ್ರಿ ಮಾಡುವುದು ಒಂದು ಕಲೆಯಾಗಿದ್ದು, ಬೇಕಿದ್ರೆ ನಾನು ಸಾವಿರ ಬಾರಿ ಅದನ್ನು ಮಾಡುತ್ತೇನೆ. ಹೀಗೆ ಮಾಡಲು ನನಗೆ ಹಕ್ಕಿದೆ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಮತ್ತೆ ಉದ್ಧಟತನ ಮೆರೆದಿದ್ದಾರೆ.
ಪಶ್ಚಿಮ ಬಂಗಾಳದ (West Bengal) ಶ್ರೀರಾಮ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ , ಕ್ಷುಲ್ಲಕ ವಿಚಾರದಲ್ಲಿ ಅಸಮಾಧಾನಗೊಂಡಿದ್ದಕ್ಕಾಗಿ ಧನ್ಕರ್ ಅವರನ್ನು ಟೀಕಿಸಿದರು. ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲೆ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲಾ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ಆದರೆ ನಾನು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಬ್ಯಾನರ್ಜಿಯವರ ಮಿಮಿಕ್ರಿಯಿಂದ ರೈತ ಸಮುದಾಯಕ್ಕೆ ಅವಮಾನವಾಗಿದೆ ಎಂಬ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ (Jagadeep Dhankar) ಹೇಳಿಕೆಯನ್ನು ಉಲ್ಲೇಖಿಸಿದ ಟಿಎಂಸಿ ಸಂಸದರು, ಧನ್ಕರ್ ಅವರು ಜೋಧ್‌ಪುರದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ದೆಹಲಿಯಲ್ಲಿ ಐಷಾರಾಮಿ ಫ್ಲ್ಯಾಟ್ ಹೊಂದಿದ್ದಾರೆ. ಅಲ್ಲದೇ ಅವರು ಲಕ್ಷ ರೂಪಾಯಿ ಮೌಲ್ಯದ ಸೂಟ್ ಧರಿಸುತ್ತಾರೆ ಎಂದು ಆರೋಪಿಸಿದರು. ಇದನ್ನೂ ಓದಿ: 20 ವರ್ಷದಿಂದ ನಾನೂ ಅವಮಾನಗಳನ್ನು ಎದುರಿಸಿದ್ದೇನೆ: ಧನ್ಕರ್‌ಗೆ ಕರೆ ಮಾಡಿ ಕಹಿ ಅನುಭವ ಹಂಚಿಕೊಂಡ ಮೋದಿ
ಇದೇ ವೇಳೆ ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ (Security breach in Lok Sabha) ಕುರಿತು ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನೂ ಟೀಕಿಸಿದರು. ಬಿಜೆಪಿ ಸಂಸದರೊಬ್ಬರು ಇಬ್ಬರು ಒಳನುಗ್ಗುವವರಿಗೆ ಸಂದರ್ಶಕರ ಪಾಸ್‌ಗಳನ್ನು ನೀಡಿದ್ದರು. ಬಳಿಕ ಅವರನ್ನು ಉಳಿಸುವ ಸಲುವಾಗಿ 146 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ಬ್ಯಾನರ್ಜಿ ಟಾಂಗ್ ನೀಡಿದರು.
ಮಿಮಿಕ್ರಿ ಮಾಡಿರುವ ಪ್ರಕರಣ ಸಂಬಂಧ ಜಕಲ್ಯಾಣ್ ಬ್ಯಾನರ್ಜಿ ವಿರುದ್ಧ ನವದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿದೆ. ದಕ್ಷಿಣ ದೆಹಲಿಯ ಪೊಲೀಸ್ ಉಪ ಕಮಿಷನರ್ ಪ್ರಕಾರ, ನಗರದ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ಗೌತಮ್ ಎಂಬ ವಕೀಲರು ಬ್ಯಾನರ್ಜಿ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 20 ವರ್ಷದಿಂದ ನಾನೂ ಅವಮಾನಗಳನ್ನು ಎದುರಿಸಿದ್ದೇನೆ: ಧನ್ಕರ್‌ಗೆ ಕರೆ ಮಾಡಿ ಕಹಿ ಅನುಭವ ಹಂಚಿಕೊಂಡ ಮೋದಿ