ಕೋಲ್ಕತ್ತಾ: ಬಿಜು ಜನತಾದಳ (ಬಿಜೆಡಿ) ನಾಯಕ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.40.5 ರಷ್ಟು ಮಹಿಳಾ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
Advertisement
West Bengal CM and TMC leader Mamata Banerjee: Trinamool Congress will field 40.5% female candidate in the upcoming Lok Sabha elections. This is a proud moment for us. pic.twitter.com/B1B2dBQOzY
— ANI (@ANI) March 12, 2019
Advertisement
ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹೊಸ ಅಲೆಯನ್ನೇ ಎಬ್ಬಿಸಿದೆ. ಅಷ್ಟೇ ಅಲ್ಲದೆ ಟಿಎಂಸಿ ಈ ಬಾರಿ ಒಡಿಶಾ, ಅಸ್ಸಾಂ, ಜಾರ್ಖಂಡ್, ಬಿಹಾರ್ ಹಾಗೂ ಅಂಡಮಾನ್‍ನ ಲೋಕಸಭಾ ಕ್ಷೇತ್ರಗಳ ಪೈಕಿ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
Advertisement
ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಈ ಬಾರಿ ಹಂಚಿಕೆಯಾಗಲಿರುವ ಲೋಕಸಭಾ ಟಿಕೆಟ್ ಗಳಲ್ಲಿ ಶೇ.33 ಸ್ಥಾನಗಳನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದರು. ಕಳೆದ ವರ್ಷ ಒಡಿಶಾ ವಿಧಾನಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾತಿ ಸಂಬಂಧ ಮಂಡನೆಯಾಗಿದ್ದ ಮಸೂದೆ ಅವಿರೋಧವಾಗಿ ಪಾಸ್ ಆಗಿತ್ತು.
Advertisement
West Bengal CM and TMC chief Mamata Banerjee: Moon Moon Sen will be our candidate from Asanasol, Satabdi Roy from Birbhum. pic.twitter.com/ppcHaYzf3l
— ANI (@ANI) March 12, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv