ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಮೃತ ಟಿಎಂಸಿ ಕಾರ್ಯಕರ್ತನನ್ನು ಜಲೇ ಆಲಂ ಗಾಜಿ ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಹರಿತವಾದ ಆಯುಧದಿಂದ ಇರಿದಿದ್ದು, ದೇಹದ ಮೇಲ್ಭಾಗದಲ್ಲಿ ತೀವ್ರವಾದ ಗಾಯಗಳಾಗಿದೆ. ಈ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿಯಲ್ಲಿರುವ ಭರತ್‍ಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯ ನೀತಿ ಹಗರಣದಲ್ಲಿ ಸಿಸೋಡಿಯಾ ನಂ.1 ಆರೋಪಿ, ಕೇಜ್ರಿವಾಲ್ ಕಿಂಗ್‌ಪಿನ್ – ಕೇಂದ್ರ ಸಚಿವ ಆರೋಪ
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಉದ್ದೇಶವೇನು ಎಂಬುವುದರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇದೀಗ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ತರಗತಿಗಳಲ್ಲಿ ಹುಡುಗ-ಹುಡುಗಿ ಒಟ್ಟಿಗೇ ಕೂರೋದು ಅಪಾಯಕಾರಿ: ಮುಸ್ಲಿಂ ಮುಖಂಡ ಹೇಳಿಕೆ