ಬೆಂಗಳೂರು: ಕೃಷಿ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿ ಅದನ್ನು ಕಾರ್ಪೊರೇಟ್ ಬಂಡವಾಳಗಾರರ ಕಾಲಿಗೆ ತಳ್ಳಿರುವುದೇ ಪ್ರಧಾನಿ ನರೇಂದ್ರ ಮೋದಿ ಅವರ 8 ವರ್ಷದ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿರುವ ಅವರು, ಕಳೆದ 8 ವರ್ಷಗಳಲ್ಲಿ ಮೋದಿಯವರು ಹೇಳಿದ ಸುಳ್ಳುಗಳಿಗೆ ಲೆಕ್ಕವೇ ಇಲ್ಲ. ಅವುಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದೂ ಸೇರಿದೆ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಘೋಷಣೆ ಮಾಡಿದ್ದ ಮೋದಿ ಅದನ್ನು ಸಂಪೂರ್ಣ ಹಾಳುಗೆಡವಿದ್ದಾರೆ. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ
Advertisement
Advertisement
ನ್ಯಾಷನಲ್ ಮಾದರಿ ಸಮೀಕ್ಷೆ ಪ್ರಕಾರ 2015-16 ರಲ್ಲಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 96,703 ರೂಪಾಯಿಗಳಷ್ಟಿತ್ತು ಎಂದು ಅಂದಾಜಿಸಲಾಗಿದೆ. ಅಂದರೆ ಒಂದು ಕೃಷಿ ಕುಟುಂಬದ ತಿಂಗಳ ಸರಾಸರಿ ಆದಾಯ 8,000 ರೂಪಾಯಿ ಎಂದಾಯಿತು. ಈ 8 ಸಾವಿರ ರೂಪಾಯಿಗಳಲ್ಲಿ ಸರಾಸರಿ ಶೇ.43 ರಷ್ಟು ಕೂಲಿಯಿಂದ ಬರುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್
Advertisement
Advertisement
2022 ರಲ್ಲಿ ಇದು ದ್ವಿಗುಣಗೊಳ್ಳಬೇಕಾದರೆ 2015-16ರ ಬೆಲೆಗಳಲ್ಲಿ ಲೆಕ್ಕ ಹಾಕಿದರೆ ಸರಾಸರಿ ಪ್ರತಿ ರೈತ ಕುಟುಂಬದ ತಿಂಗಳ ಆದಾಯ 16,000 ರೂಪಾಯಿಗಳಿಗೆ ಏರಿಕೆಯಾಗಬೇಕು. ವರ್ಷಕ್ಕೆ 1,72,694 ರೂಪಾಯಿಗಳಷ್ಟಾಗಬೇಕು. ಇಂದಿನ ಬೆಲೆಗಳಲ್ಲಿ, ಹಣದುಬ್ಬರ ಸೇರಿಸಿ ಲೆಕ್ಕ ಹಾಕಿದರೆ 2.5 ರಿಂದ 2.8 ಲಕ್ಷ ರೂಪಾಯಿಗಳಾಗಬೇಕು ಅಥವಾ ತಿಂಗಳಿಗೆ 22 ರಿಂದ 25 ಸಾವಿರ ರೂಪಾಯಿಗಳಾಗಬೇಕು ಎಂದು ತಜ್ಞರು ಹೇಳುತ್ತಿದ್ದಾರೆ. ರೈತರ ಆದಾಯ ದ್ವಿಗುಣಗೊಳ್ಳಬೇಕಾಗಿದ್ದರೆ 2016 ರಿಂದಲೆ ನಿರಂತರವಾಗಿ ಕೃಷಿ ಕ್ಷೇತ್ರದ ಬೆಳವಣಿಗೆ ಪ್ರತಿ ವರ್ಷ ಸುಮಾರು ಶೇ.10.5 ರಷ್ಟು ಇರಬೇಕಿತ್ತು. ಆದರೆ ವಾಸ್ತವವಾಗಿ ಬೆಳವಣಿಗೆಯಾಗಿದ್ದು ಕೇವಲ ಶೇ.2.88 ರಷ್ಟು ಮಾತ್ರ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
2019-20 ರಲ್ಲಿ ಎನ್‌ಎಸ್‌ಎಸ್‌ಒ ಹಲವು ಆಯಾಮಗಳಲ್ಲಿ ಸಮೀಕ್ಷೆ ಮಾಡಿತು. ಆದರೆ ಸಮೀಕ್ಷೆಯ ವರದಿಗಳನ್ನು ಗುಪ್ತವಾಗಿ ಪರಿಶೀಲಿಸಿದ ಕೇಂದ್ರ ಸರ್ಕಾರಕ್ಕೆ, ಆ ವರದಿಯು ತನಗೆ ವ್ಯತಿರಿಕ್ತವಾಗಿದೆ ಎಂದಬು ಪರಿಗಣಿಸಿಯೇ ವರದಿ ಬಿಡುಗಡೆ ಮಾಡಲಿಲ್ಲ. ಆದರೂ ಮಾಧ್ಯಮಗಳಿಗೆ ವರದಿ ಸೋರಿಕೆಯಾಯಿತು. ಸರ್ಕಾರದ ಡೇಟಾ ನೋಡಿದರೂ ಕೂಡ ಮನಮೋಹನಸಿಂಗ್ ಅವರ ಯುಪಿಎ ಅವಧಿಯಲ್ಲಿ ಕೃಷಿಯ ಜಿವಿಎ ಬೆಳವಣಿಗೆ ದರ ಸರಾಸರಿ ಶೇ. 4.6 ಕ್ಕಿಂತ ಹೆಚ್ಚಿಗೆ ಇತ್ತು. ಮೋದಿಯವರ ಕಾಲದಲ್ಲಿ ಕೇವಲ ಶೇ. 3.3ಕ್ಕೆ ಇಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಷ್ಟೆಲ್ಲಾ ಆದರೂ ಮೋದಿ ಅವರ ಸರ್ಕಾರ ಜಾಹಿರಾತು ಕೊಟ್ಟು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ಕೃಷಿಕರ ಉಳಿವಿಗಾಗಿ ಎಂಎಸ್‌ಪಿ ಹೆಚ್ಚಿಸಿದ್ದೇವೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಹಿಂದೂಗಳ ರಕ್ಷಣೆ ಹೆಸರಲ್ಲಿ ಅಧಿಕಾರಕ್ಕೇರಿ, ಹಿಂದೂ ವಿರೋಧಿ ವರ್ತನೆ ಸರಿಯಲ್ಲ: ಮುತಾಲಿಕ್
ಮನಮೋಹನಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ 2004 ರಿಂದ 2013-14ರ ವೇಳೆಗೆ ಹಲವಾರು ಕೃಷಿ ಉತ್ಪನ್ನಗಳಿಗೆ ಶೇ.204ರ ವರೆಗೆ ಬೆಂಬಲ ಬೆಲೆ ಹೆಚ್ಚಿಸಿದ್ದರು. ಭತ್ತದ ಮೇಲೆ ನೀಡುವ ಎಂಎಸ್‌ಪಿ ಶೇ.126 ರಷ್ಟು ಹೆಚ್ಚು ಮಾಡಿದ್ದರು. ಮೋದಿಯವರು ಈ 8 ವರ್ಷಗಳಲ್ಲಿ ಭತ್ತದ ಎಂಎಸ್‌ಪಿ ಯನ್ನು ಶೇ.44 ರಷ್ಟು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.
ತೊಗರಿಯ ಬೆಂಬಲ ಬೆಲೆಯನ್ನು ಮನಮೋಹನಸಿಂಗರು ಶೇ.204 ರಷ್ಟು ಹೆಚ್ಚಿಸಿದ್ದರೆ ಮೋದಿಯವರು ಶೇ.44 ರಷ್ಟು ಹೆಚ್ಚಿಸಿದ್ದಾರೆ. ಬಿಳಿ ಜೋಳದ ಮೇಲೆ ಶೇ.178 ರಷ್ಟು ಹೆಚ್ಚಿಸಿದ್ದರೆ ಮೋದಿಯವರ ಸರ್ಕಾರ ಕೇವಲ ಶೇ.78 ರಷ್ಟು ಹೆಚ್ಚಿಸಿದೆ. ಶೇಂಗಾ ಪರಿಸ್ಥಿತಿಯೂ ಅಷ್ಟೆ ಯುಪಿಎ ಸರ್ಕಾರ ಶೇ.163 ರಷ್ಟು ಹೆಚ್ಚಿಸಿತ್ತು. ಬಿಜೆಪಿ ಸರ್ಕಾರ ಕೇವಲ ಶೇ. 31.5 ರಷ್ಟು ಹೆಚ್ಚಿಸಿದೆ. ಹೆಸರು ಕಾಳಿನ ಮೇಲಿನ ಎಂಎಸ್‌ಪಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಶೇ.196 ರಷ್ಟು ಹೆಚ್ಚಿಸಿದ್ದರೆ ಬಿಜೆಪಿ ಸರ್ಕಾರ ಕೇವಲ ಶೇ.56 ರಷ್ಟು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷದವರೆಗೆ 47 ಲಕ್ಷ ರೈತ ಕುಟುಂಬಗಳಿಗೆ ತಿಂಗಳಿಗೆ ನೀಡಿದ್ದು ಕೇವಲ 166 ರೂಪಾಯಿ ಮಾತ್ರ. ಇದು ಬಿಜೆಪಿಯವರ ಸಾಧನೆ. ಕೃಷಿಕರ ಆದಾಯ 8 ವರ್ಷಗಳಲ್ಲಿ ದ್ವಿಗುಣಗೊಳ್ಳುವ ಬದಲು ಅವರ ಸಾಲದ ಪ್ರಮಾಣ ದ್ವಿಗುಣಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.