ನವದೆಹಲಿ: ಗ್ರಾಮೀಣ ಪ್ರದೇಶದ ರೈತರ (Farmers) ಆದಾಯವನ್ನು ಹೆಚ್ಚಿಸುವ ಹಾಗೂ ಬೆಳೆ ವೈವಿಧ್ಯತೆಯನ್ನು ಉತ್ತೇಜಿಸುವ ಉದ್ದೇಶದಿಂದ ಖಾರಿಫ್ ಕಾಲದ ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (Minimum Support Prices) ಹೆಚ್ಚಳ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 2023-24ರ ಮಾರುಕಟ್ಟೆಯ ಎಲ್ಲಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಕೇಂದ್ರ ಘೋಷಿಸಿದೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ
ಭಾರತದ ಅತ್ಯಂತ ವ್ಯಾಪಕವಾಗಿ ಬೆಳೆಯುವ ಬೆಳೆಯಾದ ಭತ್ತವು ಅದರ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ಕೆಜಿಗೆ (ಕ್ವಿಂಟಲ್) 2040 ರೂ. ರಿಂದ ಸಾಮಾನ್ಯ ತಳಿಗೆ 2183 ರೂ., ಗ್ರೇಡ್ ಎ ತಳಿಗೆ 2060 ರೂ. ನಿಂದ 2203 ರೂ. ಏರಿಕೆ ಮಾಡಲಾಗಿದೆ.
ಬೇಳೆಕಾಳುಗಳು, ಎಣ್ಣೆಕಾಳುಗಳು, ಹತ್ತಿ ಮತ್ತು ರಾಗಿಯಂತಹ ಇತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ 4% ರಿಂದ 12% ವರೆಗೆ ಹೆಚ್ಚಳ ಆಗಿದೆ. ಈ ಹೆಚ್ಚಳವು ರೈತರಿಗೆ ಅವರ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 50% ಲಾಭಾಂಶವನ್ನು ಖಾತರಿಪಡಿಸುವ ನೀತಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಸರ್ಕಾರ ಕೈಗೊಂಡಿರುವ ಈ ಕ್ರಮವು ರೈತರನ್ನು ತಮ್ಮ ಬೆಳೆಗಳನ್ನು ವೈವಿಧ್ಯಗೊಳಿಸಲು ಮತ್ತು ಹೆಚ್ಚಿನ ಇಳುವರಿ ನೀಡುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ. ಇದು ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಪೌಷ್ಠಿಕ-ಧಾನ್ಯಗಳಿಗೆ ಉತ್ತೇಜಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.
2022-23 ರ ಒಟ್ಟು ಆಹಾರ ಧಾನ್ಯ ಉತ್ಪಾದನೆಯನ್ನು 330.5 ಮಿಲಿಯನ್ ಟನ್‍ಗಳಿಗೆ ನಿರೀಕ್ಷಿಸಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 14.9 ಮಿಲಿಯನ್ ಟನ್‍ಗಳ ಹೆಚ್ಚಳವಾಗಿದೆ. ಇದು ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಏರಿಕೆಯಾಗಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಎನ್ನುವುದು ರೈತರಿಂದ ಬೆಳೆಗಳನ್ನು ಖರೀದಿಸಲು ಸರ್ಕಾರ ನಿಗದಿಪಡಿಸಿದ ದರವಾಗಿದೆ. ಇದು ಮಾರುಕಟ್ಟೆಯ ಬೆಲೆ ಏರಿಳಿತಗಳ ವಿರುದ್ಧ ಸುರಕ್ಷತಾ ಬೆಲೆಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ