ಹುಬ್ಬಳ್ಳಿ: ಜನತಾ ಬಜಾರ್ ಮಾರುಕಟ್ಟೆಯಲ್ಲಿ ಅಜ್ಜಿಯೊಬ್ಬರು ಕೊರೊನಾ ಲಸಿಕೆಯನ್ನು ಹಾಕಿಕೊಳ್ಳಲು ರಂಪಾಟ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ ಲಸಿಕೆಯನ್ನು ಎಲ್ಲರೂ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಹುಬ್ಬಳ್ಳಿಯ ಜನತಾ ಬಜಾರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡುವವರ ಬಳಿಗೆ ತೆರಳಿ ಲಸಿಕೆ ನೀಡಲಾಗುತ್ತಿದೆ. ಆದರೆ ಇಲ್ಲಿಯೇ ವ್ಯಾಪಾರ ಮಾಡುತ್ತಿದ್ದ ಅಜ್ಜಿಯೊಬ್ಬರು ಲಸಿಕೆ ನೀಡುವ ವೇಳೆಗೆ ದೊಡ್ಡ ರಾದ್ಧಾಂತವನ್ನು ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.
Advertisement
Advertisement
ವೀಡಿಯೋದಲ್ಲಿ ಏನಿದೆ?: ಲಸಿಕೆ ನೀಡಲು ಸಿಬ್ಬಂದಿ ಬೀದಿಬದಿ ತರಕಾರಿ ಮಾರಾಟ ಮಾಡುವ ಅಜ್ಜಿ ಬಳಿ ಬಂದಿದ್ದಾರೆ. ಆದರೆ ಅವರು ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಅಕ್ಕ-ಪಕ್ಕದ ವ್ಯಾಪಾರಸ್ಥರು ಸೇರಿಕೊಂಡು ಅಜ್ಜಿಗೆ ಲಸಿಕೆ ಹಾಕಲು ಸಹಾಯ ಮಾಡಿದ್ದಾರೆ. ಆ ಸಂದರ್ಭದಲ್ಲಿ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಸ್ಪತ್ರೆ ಸಿಬ್ಬಂದಿ ಅಜ್ಜಿಗೆ ಲಸಿಕೆ ನೀಡಿದ್ದಾರೆ. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ
Advertisement
Advertisement
ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದರೂ, ಜನ ಮಾತ್ರ ಇನ್ನೂ ಜಾಗರೂಕರಾಗಿಲ್ಲ. ಸಾರ್ವಜನಿಕರಿಗೆ ಲಸಿಕೆ ನೀಡಲು ವೈದ್ಯಕೀಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ