ಕನ್ನಡದ ಪ್ರತಿಭಾನ್ವಿತ ನಟ ರಾಜ್ ಬಿ ಶೆಟ್ಟಿಗೆ (Raj B Shetty) ಬೇಡಿಕೆ ಹೆಚ್ಚಾಗಿದೆ. ಮಾಲಿವುಡ್ ಬಳಿಕ ಬಾಲಿವುಡ್‌ನಿಂದ (Bollywood) ಕನ್ನಡದ ಈ ನಟನಿಗೆ ಬುಲಾವ್ ಬಂದಿದೆ. ಸ್ಟಾರ್ ನಿರ್ದೇಶಕನ ಸಿನಿಮಾದಲ್ಲಿ ನಟಿಸುವ ಚಾನ್ಸ್ ಸಿಕ್ಕಿದೆ.
ಮಮ್ಮುಟ್ಟಿ ಜೊತೆ ನಟಿಸಿ ಫಳಗಿದ ಮೇಲೆ ರಾಜ್ ಬಿ ಶೆಟ್ಟಿಗೆ ಮತ್ತಷ್ಟು ಅವಕಾಶಗಳು ಅರಸಿ ಬರುತ್ತಿವೆ. ಸದ್ಯ ಬಾಲಿವುಡ್ ಡೈರೆಕ್ಟರ್ ಅನುರಾಗ್ ಕಶ್ಯಪ್ (Anurag Kashyap) ನಿರ್ದೇಶನದಲ್ಲಿ ನಟಿಸಲು ರಾಜ್‌ರನ್ನು ಕೇಳಲಾಗಿದೆ. ಇದನ್ನೂ ಓದಿ:ಪತ್ರಕರ್ತ ಹರೀಶ್ ನಟನೆಯ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಸರ್ಜಾ ಚಾಲನೆ
ಅವರ ಸಿನಿಮಾದಲ್ಲಿ ಕ್ಯಾಮಿಯೋ ಪಾತ್ರವಾಗಿದ್ರೂ ಅದಕ್ಕೆ ಪ್ರಾಮುಖ್ಯತೆ ಇದ್ದು, ನಟಿಸಲು ರಾಜ್ ಬಿ ಶೆಟ್ಟಿ ಓಕೆ ಎಂದಿದ್ದಾರೆ. ‘ಅನಿಮಲ್’ ಖ್ಯಾತಿಯ ನಟ ಬಾಬಿ ಡಿಯೋಲ್ (Bobby Deol) ಜೊತೆ ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ತಿದ್ದಾರೆ. ಸದ್ಯದಲ್ಲೇ ಅನುರಾಗ್ ಕಶ್ಯಪ್ ಸಿನಿಮಾ ಟೈಟಲ್ ಮತ್ತು ತಾರಾಬಳಗದ ಬಗ್ಗೆ ಅವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಅಂದಹಾಗೆ, ಅರ್ಜುನ್ ಜನ್ಯ ನಿರ್ದೇಶನದ ’45’ ಎಂಬ ಸಿನಿಮಾದಲ್ಲಿ ಶಿವಣ್ಣ ಮತ್ತು ಉಪೇಂದ್ರ ಜೊತೆ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಬಗ್ಗೆ ಮಾಹಿತಿ ಸಿಗಲಿದೆ.