ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh) ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ (Prasad Biddappa) ಅವರ ಪುತ್ರಿ ಅವಿವಾ (Aviva Biddappa) ಜೊತೆ ಅಭಿಷೇಕ್ ಇಂದು ಎಂಗೇಜ್ ಆಗಿದ್ದಾರೆ.
Advertisement
ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಜೊತೆ ಎಂಗೇಜ್‌ಮೆಂಟ್ ನೆರವೇರಿದೆ. ಈ ವೇಳೆ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದು, ಜೋಡಿಗಳಿಗೆ ಶುಭಹಾರೈಸಿದರು.
Advertisement
Advertisement
ಚಿತ್ರರಂಗದ ಗಣ್ಯರು ಹೊಸ ಜೋಡಿಗೆ ಶುಭಹಾರೈಸಿದ್ದಾರೆ. ಇನ್ನೂ ಅಭಿಷೇಕ್ ಮುಂದಿನ ಚಿತ್ರಕ್ಕೆ ಡೈರೆಕ್ಷನ್ ಮಾಡುತ್ತಿರುವ ಎಸ್. ಮಹೇಶ್ ಕುಮಾರ್ ಕೂಡ ನಿಶ್ಚಿತಾರ್ಥಕ್ಕೆ ಭಾಗಿಯಾಗಿದ್ದಾರೆ. ಈಗ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
Advertisement
ಅವಿವಾ ಮತ್ತು ಅಭಿಷೇಕ್ ಹಲವು ವರ್ಷಗಳಿಂದ ಸ್ನೇಹಿತರು. ಈ ಸ್ನೇಹ ಪ್ರೇಮಕ್ಕೆ ತಿರುಗಿ, ಇದೀಗ ನವ ಜೀವನಕ್ಕೆ ಕಾಲಿಡುತ್ತಿದೆ ಜೋಡಿ. ಅವಿವಾ ಕೂಡ ತಮ್ಮ ತಂದೆಯ ಹಾದಿಯಲ್ಲೇ ಸಾಗಿದ್ದು, ಫ್ಯಾಷನ್ ಲೋಕದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಜೋಡಿಯ ಮದುವೆ ಮುಂದಿನ ವರ್ಷ ನಡೆಯಲಿದೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಚಿತ್ರದಲ್ಲಿ ಅಬ್ಬರಿಸಲಿದ್ದಾರಾ ರಾಣಾ ದಗ್ಗುಭಾಟಿ?