ಬೆಂಗಳೂರು: ಸರ್ಕಾರದ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ಇಂದು (ಶುಕ್ರವಾರ) ನಡೆಯಲಿದೆ. ಭಾರೀ ಕುತೂಹಲ ಮೂಡಿಸಿರುವ ಸಂಪುಟ ಸಭೆಯಲ್ಲಿ ಸರ್ಕಾರ ತನ್ನ ಭರವಸೆಯ ಗ್ಯಾರಂಟಿಗಳ ಜಾರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಅದು ಐದು ಗ್ಯಾರಂಟಿಗಳ ಘೋಷಣೆನಾ ಅಥವಾ ಮೂರು ಗ್ಯಾರಂಟಿಗಳ ಜಾರಿನಾ ಎಂಬ ಪ್ರಶ್ನೆ ಜೊತೆಗೆ ಯಾವ ಕಂಡೀಶನ್ ಹಾಕಬಹುದು ಎಂಬ ಕುತೂಹಲವು ಮೂಡಿದೆ.
ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.
Advertisement
Advertisement
ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಗೂ ಮುನ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.
Advertisement
ಕ್ಯಾಬಿನೆಟ್ ಸಭೆಯಲ್ಲಿಯೇ ಗ್ಯಾರಂಟಿ ಘೋಷಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಸುದ್ದಿಗೋಷ್ಢಿ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.
Advertisement
5 ಗ್ಯಾರಂಟಿಗಳಲ್ಲಿ ಎಷ್ಟು ಗ್ಯಾರಂಟಿ ಘೋಷಣೆ ಅನ್ನೋದೇ ಸದ್ಯಕ್ಕೆ ಇರುವ ಕುತೂಹಲ. 5 ರ ಪೈಕಿ ಮೂರು ಗ್ಯಾರಂಟಿಗಳ ಘೋಷಣೆ ಸಾಧ್ಯತೆ ಇದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. ಉಳಿದ ಗೃಹಲಕ್ಷ್ಮಿ ಹಾಗೂ ಯುವನಿಧಿ ಗ್ಯಾರಂಟಿ ಸ್ವಲ್ಪ ದಿನಗಳ ನಂತರ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಗ್ಯಾರಂಟಿಗಳ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ.