Saturday, 21st July 2018

Recent News

ಸಿಎಂಗೆ ಇಂದು 69ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಇಂದು 69ನೇ ಹುಟ್ಟುಹಬ್ಬದ ಸಂಭ್ರಮ. ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬವನ್ನು ಯಾವತ್ತೂ ಆಚರಿಸಿಕೊಂಡಿಲ್ಲ.

ನಾನು ಹುಟ್ಟಿದ ದಿನವೇ ಸರಿಯಾಗಿ ಗೊತ್ತಿಲ್ಲ ಅನ್ನುವ ಸಿದ್ದರಾಮಯ್ಯ ಅವರು ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಕಾರ್ಯಕರ್ತರು, ಅಭಿಮಾನಿಗಳಿಗೂ ಹುಟ್ಟುಹಬ್ಬ ಆಚರಿಸಬೇಡಿ ಎಂದೂ ಸಿಎಂ ಹೇಳಿದ್ದಾರೆ.

ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಮೈಸೂರಿನ ವರುಣ ಹೋಬಳಿಯ ಸಿದ್ದರಾಮನಹುಂಡಿಯಲ್ಲಿ ಆಗಸ್ಟ್ 12, 1948ರಂದು ಜನಿಸಿದರು. 2015ರಲ್ಲಿ ಬರದ ಕಾರಣದಿಂದಾಗಿ ಸಿಎಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಕಳೆದ ವರ್ಷದ ಜುಲೈನಲ್ಲಿ ಹಿರಿಯ ಪುತ್ರ ರಾಕೇಶ್ ನಿಧನದ ಶೋಕದಲ್ಲಿದ್ದರು.

ನಿನ್ನೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹೊಲಿಗೆ ಯಂತ್ರ, ವಿಕಲಚೇತನರಿಗೆ ಸೈಕಲ್ ಮತ್ತು ಸೋಲಾರ್ ದೀಪ ವಿತರಿಸುವ ಮೂಲಕ ಸಿದ್ದರಾಮಯ್ಯ ಬರ್ತ್‍ಡೇ ಆಚರಿಸಿದರು. ಇಂದು ಅವರು ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ಇಡೀ ದಿನ ರಾಯಚೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಳಲ್ಲಿದ್ದಾರೆ.

Leave a Reply

Your email address will not be published. Required fields are marked *