DistrictsKarnatakaLatestMain PostUttara Kannada

ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ

Advertisements

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಇಂದು ಮತ್ತು ನಾಳೆ ಕಾರವಾರದ ಅರಗ ಬಳಿ ಇರುವ ಕದಂಬ ನೌಕಾನೆಲೆಗೆ ಭೇಟಿ ನೀಡಲಿದ್ದಾರೆ. ರಕ್ಷಣಾ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನೌಕಾನೆಲೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು

ಇಂದು ಅರಗಾ ಬಳಿ ಕದಂಬ ನೌಕಾನೆಲೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯ ಜಲಾಂತರ್ಗಾಮಿ ಸಮುದ್ರಯಾನದಲ್ಲಿ ಭಾಗಿ ಆಗಲಿರುವ ರಾಜನಾಥ್ ಸಿಂಗ್ ಅವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ನೌಕಾನೆಲೆಗೆ ವಾಪಾಸ್ ಆಗಲಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೆ ಚಾಲನೆ

ಮತ್ತೊಂದೆಡೆ ಇದೇ ಜೂನ್ 21ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆಯ ಪ್ರಯುಕ್ತ ಮೈಸೂರಿಗೆ ಆಗಮಿಸಲಿದ್ದಾರೆ. ಒಟ್ಟಾರೆ ಕರ್ನಾಟಕಕ್ಕೆ ಬಿಜೆಪಿಯ ದಿಗ್ಗಜರು ಒಬ್ಬರ ನಂತರ ಮತ್ತೊಬ್ಬರು ಭೇಟಿ ನೀಡುತ್ತಿರುವುದು ಎಲ್ಲರಲ್ಲಿಯೂ ಸಂತಸ ತರಿಸಿದೆ.

Leave a Reply

Your email address will not be published.

Back to top button