ಕರ್ನಾಟಕದಲ್ಲಿ ಗಣೇಶನನ್ನು ಕಾಂಗ್ರೆಸ್‌ ಸರ್ಕಾರ ಪೊಲೀಸ್‌ ವ್ಯಾನ್ ಕಂಬಿ ಹಿಂದೆ ಹಾಕಿದೆ:‌ ಮೋದಿ ವಾಗ್ದಾಳಿ

Public TV
2 Min Read
narendra modi karnataka ganesh violence

– ವಿಘ್ನನಿವಾರಕನ ಪೂಜೆಗೂ ಕಾಂಗ್ರೆಸ್‌ ವಿಘ್ನ ಮಾಡುತ್ತಿದೆ
– ಗಣೇಶನನ್ನು ಬಂಧಿಸುವ ಕೆಳಮಟ್ಟಕ್ಕೆ ಕಾಂಗ್ರೆಸ್‌ ಇಳಿದಿದೆ

ನವದೆಹಲಿ: ಕರ್ನಾಟಕದಲ್ಲಿ (Karnataka) ವಿಘ್ನನಿವಾರಕನ ಪೂಜೆಯಲ್ಲೂ ವಿಘ್ನಗಳನ್ನು ತಂದೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಿಡಿಕಾರಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಆದ ಗಲಭೆ, ಘರ್ಷಣೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಒಂದು ವರ್ಗದ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕೆಳಮಟ್ಟಕ್ಕೆ ಇಳಿಯಬಹುದು. ಇಂದು ಕರ್ನಾಟಕದಲ್ಲಿ ದೇವರು ಗಣಪತಿಯನ್ನೂ ಕಾಂಗ್ರೆಸ್ (Congress) ಸರ್ಕಾರ ಕಂಬಿ ಹಿಂದೆ ಹಾಕಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: Nagamangala| ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

ಇಡೀ ದೇಶವೇ ಗಣಪತಿ ಉತ್ಸವ ಆಚರಿಸುತ್ತಿದ್ದಾರೆ. ಕರ್ನಾಟಕದಲ್ಲಿ ವಿಘ್ನನಿವಾರಕರ ಪೂಜೆಗೂ ಕಾಂಗ್ರೆಸ್‌ ವಿಘ್ನ ಮಾಡುತ್ತಿದೆ ಎಂದು ಮೋದಿ ಬೇಸರ ಹೊರಹಾಕಿದ್ದಾರೆ.

Stone pelting lathi charge during Ganesha procession in Nagamangala 4

ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕುರುಕ್ಷೇತ್ರದಲ್ಲಿ ಚುನಾವಣೆ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡಿದ ಜನರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಕಾಂಗ್ರೆಸ್‌ನ ಸುಳ್ಳುಗಳು ಕರ್ನಾಟಕ ಮತ್ತು ತೆಲಂಗಾಣವನ್ನೂ ಬಿಟ್ಟಿಲ್ಲ. ಕರ್ನಾಟಕದಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ. ಹಣದುಬ್ಬರ ಮತ್ತು ಭ್ರಷ್ಟಾಚಾರವು ಉತ್ತುಂಗದಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿಯ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಬಂಡವಾಳ ಮತ್ತು ಉದ್ಯೋಗಗಳು ಕಡಿಮೆಯಾಗಿವೆ ಎಂದು ಕಾಂಗ್ರೆಸ್ ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ನೀವು ಪಂಜಾಬ್‌ನ ಸ್ಥಿತಿಯನ್ನು ನೋಡುತ್ತಿದ್ದೀರಿ. ಹರಿಯಾಣದ ಜನರು ತಮ್ಮ ಬಳಿಗೆ ಬರಲು ಕಾಂಗ್ರೆಸ್‌ಗೆ ಬಿಡಬಾರದು. ಕಾಂಗ್ರೆಸ್‌ಗೆ ನಾನು ಸವಾಲು ಹಾಕಲು ಬಯಸುತ್ತೇನೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ರೈತ ಯೋಜನೆಗಳನ್ನು ಏಕೆ ಜಾರಿಗೆ ತರುವುದಿಲ್ಲ. ಅದನ್ನು ಮಾಡಿ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

Share This Article