ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪಾಲಿಗಿಂದು ಬಿಗ್ ಡೇ.. ಕಾರಣ, ಮುಡಾ ಕೇಸಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (Karnataka High Court) ಇಂದು ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ವಿಚಾರದಲ್ಲಿ ಹೈಕೋರ್ಟ್ ನೀಡುವ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.
ಒಂದೊಮ್ಮೆ ತೀರ್ಪು ಸಿಎಂ ಸಿದ್ದರಾಮಯ್ಯ ಪರವಾಗಿ ಬಂದ್ರೆ ಅವರ ಕುರ್ಚಿ ಸೇಫ್ ಆಗಲಿದೆ. ಇಲ್ಲದಿದ್ದರೆ ಸಿದ್ದರಾಮಯ್ಯ ರಾಜಕೀಯವಾಗಿ ಸಂಕಷ್ಟಕ್ಕೆ ಈಡಾಗಬಹುದು ಎಂಬ ವಿಶ್ಲೇಷಣೆ ಕೇಳಿಬರ್ತಿದೆ. ಯಾವುದಕ್ಕೂ ಇರಲಿ ಎಂದು, ತೀರ್ಪು ಬಂದ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್ ಹ್ಯಾಕ್ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್ ತಪ್ಪಿಸಲು ಏನು ಮಾಡ್ಬೇಕು?
ಮತ್ತೊಂದು ಕಡೆ ವಿಪಕ್ಷಗಳು ಕೂಡ ಸುಮ್ಮನಿಲ್ಲ.. ಹೈಕೋರ್ಟ್ ತೀರ್ಪು ಬಳಿಕ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿವೆ. ಮುಂದಿನ ಲೆಕ್ಕಾಚಾರಗಳನ್ನು ಹಾಕಿಕೊಂಡೇ ದೋಸ್ತಿಗಳು ಮುಂದೇನು ಮಾಡಬೇಕೆಂದು ರಣತಂತ್ರ ರೂಪಿಸ್ತಿವೆ. ಕೋರ್ಟ್ ತೀರ್ಪು ಸಿದ್ದರಾಮಯ್ಯ ವಿರುದ್ಧ ಬಂದರೆ ನಿರಂತರ ಹೋರಾಟದ ಮೂಲಕ ರಾಜೀನಾಮೆಗೆ ಒತ್ತಡ ಸೃಷ್ಟಿಸುವ ಲೆಕ್ಕಾಚಾರದಲ್ಲಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾ ಫೈಟ್ – ಈ ಬಾರಿ `ಮಹಿಷ ಮಂಡಲೋತ್ಸವ’!
ವಿಚಾರಣೆ ವೇಳೆ ಸಿಎಂ ಪರ ವಾದ ಏನು?
* ದೂರುದಾರರು ಸೆಕ್ಷನ್ 17ಎ ಅಡಿ ಅನುಮತಿ ಪಡೆಯಲು ಸಾಧ್ಯವಿಲ್ಲ (ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ)
* ಇದನ್ನು ಪರಿಶೀಲಿಸುವ ಅಧಿಕಾರ ರಾಜ್ಯಪಾಲರಿಗೆ ಇರುವುದಿಲ್ಲ
* ರಾಜ್ಯಪಾಲರು ವಿವೇಚನೆ ಬಳಸಿಲ್ಲ; ಸಹಜ ನ್ಯಾಯದ ಪ್ರಕ್ರಿಯೆ ಪಾಲಿಸಿಲ್ಲ
* ಅಬ್ರಹಾಂಗೆ ಅರ್ಜಿ ಹಿಂಪಡೆಯಲು ಸೂಚಿಸಬೇಕು.. ದಂಡ ವಿಧಿಸಬೇಕು
* ಈ ಪ್ರಕರಣದ ಹಿಂದೆ ರಾಜಕೀಯ ದುರುದ್ದೇಶ ಇದೆ.
ವಿಚಾರಣೆ ವೇಳೆ ರಾಜ್ಯಪಾಲರ ಪರ ವಾದ ಏನು?
* ಪತ್ನಿಯ ತಪ್ಪಿನಲ್ಲಿ ಪತಿಯ ಪಾತ್ರ ಇದೆ
* ರಾಜ್ಯಪಾಲರು ವಿವೇಚನೆ ಬಳಸಿ ಅನುಮತಿ ನೀಡಿದ್ದಾರೆ
* ಕ್ಯಾಬಿನೆಟ್ ಸಂಪೂರ್ಣವಾಗಿ ತನ್ನ ವಿವೇಚನೆ ಬಳಸಿಲ್ಲ
* 17ಎ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ
ವಿಚಾರಣೆ ವೇಳೆ ದೂರುದಾರರ ಪರ ವಾದ ಏನು?
* ಮೇಲ್ನೋಟಕ್ಕೆ ಅಕ್ರಮ ನಡೆದಿದೆ ಅಂತ ರಾಜ್ಯಪಾಲರು ಉಲ್ಲೇಖಿಸಿದ್ದಾರೆ
* ಸೆ.17ಎ ಅಡಿ ಖಾಸಗಿ ದೂರುದಾರರು ಅನುಮತಿ ಪಡೆಯಬಹುದು
* ಕ್ಯಾಬಿನೆಟ್ ಸಭೆ ಒತ್ತಾಯದ ಮೂಲಕ ಆಗಿರಬಹುದು
* ಡೆವಲಪ್ ಆಗಿರೋ ಲೇಔಟನ್ನು ಕೃಷಿ ಭೂಮಿ ಮಾಡಿದ್ದಾರೆ
* ಭೂಸ್ವಾಧೀನಕ್ಕೆ ಪರಿಹಾರ ನೀಡಿದರೂ ಮಾಲೀಕರು ಪಡೆದಿಲ್ಲ
* 2006ರಲ್ಲಿ ಆ ಜಮೀನಿನ ಬೆಲೆ 6 ಲಕ್ಷ.. ಈಗ 55 ಕೋಟಿ ಅಂದ್ರೆ ಹೇಗೆ?