ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎರಡು ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ‘ನಾಗರಪಂಚಮಿ’ ವಿಶೇಷತೆ ಏನು?
Advertisement
Advertisement
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕುಮಾರಧಾರ ನದಿ ಸೇರಿದಂತೆ ಹಳ್ಳಗಳಲ್ಲಿ ಭಾರಿ ಪ್ರಮಾಣದ ನಿರು ಹರಿದುಬರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸೋಮವಾರ ರಾತ್ರಿ ಸುಬ್ರಹ್ಮಣ್ಯದ ಪರ್ವತಮುಖಿಯ ಕುಶಾಲಾಪ್ಪ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ.
Advertisement
Advertisement
ಭಾರೀ ಮಳೆಯಿಂದಾಗಿ ಪ್ರಸಿದ್ಧ ನಾಗಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಮುಳುಗಡೆಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎರಡು ದಿನ ಭಕ್ತರ ಪ್ರವೇಶ ನಿಷೇಧ ಹೇರಲಾಗಿದ್ದು, ಎರಡು ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರದಂತೆ ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.