ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಬಳಿಕ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯ ಮೊದಲ ಸಭೆ ನಡೆಯಲಿದೆ.
ನವದೆಹಲಿಯ ಸೇವಾ ಭವನದಲ್ಲಿರುವ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಿಯಂತ್ರಣ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಕಾವೇರಿ ಕಣಿವೆ ರಾಜ್ಯದ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
Advertisement
ಸಭೆಯಲ್ಲಿ ಮುಂದಿನ ಕ್ರಿಯಾ ಯೋಜನೆ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಿಯಂತ್ರಣ ಸಮಿತಿ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಸ್ಥಾಪಿಸಬೇಕಿದ್ದು ಈ ಸಂಬಂಧ ಚರ್ಚೆ ನಡೆಯಲಿದೆ. ಪ್ರಮುಖವಾಗಿ ಕಾವೇರಿ ಪ್ರಾಧಿಕಾರ ಈಗಾಗಲೇ ಜುಲೈ ತಿಂಗಳ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಪರಿಷ್ಕೃತವಾಗಿ ಎಷ್ಟು ಪ್ರಮಾಣದ ನೀರು ಬಿಡಬೇಕು ಎಂಬುದು ಸಹ ನಿರ್ಧಾರವಾಗಲಿದೆ. ಇದನ್ನೂ ಓದಿ: ಕಾವೇರಿ ಪ್ರಾಧಿಕಾರದ ಮೊದಲ ಸಭೆಯಲ್ಲಿ ನಿಗದಿಗಿಂತಲೂ ಹೆಚ್ಚು ಟಿಎಂಸಿ ನೀರು ಕೇಳಿದ ತಮಿಳುನಾಡು
Advertisement
ತಿಂಗಳವಾರು ಹಂಚಿಕೆ ಬಗ್ಗೆ ಚರ್ಚೆ ಮಾಡಲಿದ್ದು ಪ್ರಾಧಿಕಾರ ಸೂಚನೆಗಳನ್ನು ಪಾಲಿಸುವುದು ಹಾಗೂ ಸಮಿತಿಯ ಕಾರ್ಯವ್ಯಾಪ್ತಿ ಏನು ಎಂಬುದರ ಬಗ್ಗೆ ಸಮಿತಿಯ ಸದಸ್ಯರು ನಿರ್ಣಯ ಮಾಡಲಿದ್ದಾರೆ.