ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಕಂಟಕ

Advertisements

ನವದೆಹಲಿ: ವಿಧಾನಸಭೆ ಚುನಾವಣೆ ತಯಾರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಇಡಿ ಮತ್ತೆ ಕಂಟಕವಾಗುವ ಸಾಧ್ಯತೆಗಳಿವೆ.

Advertisements

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರು ದೆಹಲಿಯಲ್ಲಿರುವ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲಿದ್ದಾರೆ. ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇದನ್ನೂ ಓದಿ: ಟ್ವಿಟ್ಟರ್ ಪ್ರೊಫೈಲ್ ಚೇಂಜ್ ಮಾಡಿದ ಶಿಂಧೆ – ಬಾಳ್ ಠಾಕ್ರೆ ಫೋಟೋ ಜೊತೆಗೆ ಕೊಟ್ಟ ಸಂದೇಶವೇನು?

Advertisements

ಚಾರ್ಜ್‌ಶೀಟ್‌ ಹಿನ್ನಲೆ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ನೀಡಿತ್ತು. ಸಮನ್ಸ್ ಹಿನ್ನೆಲೆ ಇಂದು ಡಿ.ಕೆ.ಶಿವಕುಮಾರ್ ವಿಚಾರಣೆ ಹಾಜರಾಗಲಿದ್ದಾರೆ. ಮೊದಲ ದಿನದ ವಿಚಾರಣೆಯಾಗಿರುವ ಹಿನ್ನೆಲೆ ಹೈಕೋರ್ಟ್‌ನಿಂದ ಈ ಹಿಂದೆ ಪಡೆದ ಜಾಮೀನು ಪರಿಶೀಲನೆ ನಡೆಯಲಿದೆ.

ಈವರೆಗೂ ಇಡಿ ಸಲ್ಲಿಸಿದ ಚಾರ್ಜ್‌ಶೀಟ್‌ ಲಭ್ಯವಾಗದ ಹಿನ್ನೆಲೆ ವಿಚಾರಣೆ ಮುಂದೂಡಲು ಡಿಕೆಶಿ ಪರ ವಕೀಲರು ಮನವಿ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: CPM ಕಚೇರಿಗೆ ಬಾಂಬ್‌ ಎಸೆದು ಸ್ಫೋಟ

Live Tv

Advertisements
Advertisements
Exit mobile version