ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಸಂಬಂಧ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.
ರಿಚ್ಮಂಡ್ ಟೌನ್‍ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನ ಮನ್ಸೂರ್ ಖಾನ್‍ಗೆ ಸಚಿವ ಜಮೀರ್ ಮಾರಾಟ ಮಾಡಿದ್ದರು. ಈ ಬಗ್ಗೆ ವಿವರಣೆಗೆ ಹಾಜಾರಾಗುವಂತೆ ಇ.ಡಿ ಅಧಿಕಾರಿಗಳು ಜಮೀರ್ ಅವರಿಗೆ ನೋಟೀಸ್ ನೀಡಿದ್ದರು. ಜೂನ್ 5ರಂದು ಖುದ್ದು ಹಾಜರಾಗಿ ಐಎಂಎ ಹಗರಣ ಆರೋಪಿ ಮನ್ಸೂರ್ ಖಾನ್ ಜೊತೆ ನಡೆಸಿದ ನಿವೇಶನ ಮಾರಾಟ ಸಂಬಂಧ ಮಾಹಿತಿ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.
Advertisement
Advertisement
ಕಳೆದ ವಾರ ಸಚಿವರ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್‍ನ ಸರ್ಕಾರಿ ಮನೆಗೆ ಹೋಗಿ ಸಚಿವರ ಕೈಗೆ ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದರು. ನೋಟಿಸ್ ತಲುಪಿದ ನಂತರ ಪ್ರತಿಕ್ರಿಯೆ ನೀಡಿದ್ದ ಜಮೀರ್ ಅವರು, ಕಾನೂನು ಪ್ರಕಾರವಾಗಿ ನಿವೇಶನ ಮಾರಾಟ ಮಾಡಿದ್ದೇನೆ. ಇಡಿ ವಿಚಾರಣೆಗೆ ಹಾಜರಾಗಿ ಎಲ್ಲಾ ದಾಖಲಾತಿಗಳನ್ನ ನೀಡಿ ವಿವರಣೆ ನೀಡುತ್ತೇನೆ ಎಂದಿದ್ದರು.
Advertisement
Advertisement
ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಂತಿನಗರದ ಇಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.