ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ..? ಬೇಲಾ..? ಎಂಬುದು ಇಂದು ಗೊತ್ತಾಗಲಿದೆ.
ಹೌದು. ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸೋಮವಾರ ನಲಪಾಡ್ ಪರ ವಕೀಲ ಉಸ್ಮಾನ್ ವಾದ ಮುಕ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಎಸ್ ಪಿಪಿ ಅವರಿಂದ ಪ್ರತಿವಾದ ನಡೆಯಲಿದೆ.
ಪ್ರತಿವಾದ ಬೇಗ ಮುಗಿದ್ರೆ ಇಂದೇ ತೀರ್ಪು ಸಿಗುವ ಸಾಧ್ಯತೆಗಳಿವೆ. 63 ನೇ ಸಿಸಿಎಚ್ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿದ್ವತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.
ಈ ಹಂತದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಲು ಸಾಧ್ಯವಿಲ್ಲ. ಹಾಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರಿಂದ ವಾದ ಮಂಡಿಸಲಾಗಿತ್ತು. ಇಂದು ಕೂಡ ಸ್ಪೆಷಲ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರಿಂದ ವಾದ ಮಂಡನೆ ನಡೆಯಲಿದೆ.
ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.
