ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ತೀರ್ಮಾನವಾಗುತ್ತದೆ.
ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಇಂದು ಮುಕ್ತಾಯ ಹಂತಕ್ಕೆ ತಲುಪಲಿದೆ. ಎರಡು ಕಡೆಯ ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ನಲಪಾಡ್‍ನ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
Advertisement
ಚಾರ್ಜ್ ಶೀಟ್ ಸಲ್ಲಿಕೆಯಾಗೋವರೆಗೂ ಕಾದು ನಲಪಾಡ್ ಸೆಷನ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದನು. ಚಾರ್ಜ್ ಶೀಟ್ ಸಲ್ಲಿಸಿರೋ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಬಿ.ವಿ.ಆಚಾರ್ಯರ ಪ್ರಬಲ ವಾದವಾಗಿದೆ .
Advertisement
ಏನಿದು ಪ್ರಕರಣ?
ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.
Advertisement
ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.