ಇಂದು ರಾತ್ರಿ ಅಮೆರಿಕಾಗೆ ಸಿಎಂ- ನನ್ನ ದುಡ್ಡಲ್ಲಿ ಫಾರಿನ್ ಟ್ರಿಪ್ ಎಂದ ಮುಖ್ಯಮಂತ್ರಿ

Public TV
1 Min Read
hdk1 1

ಬೀದರ್: ಮುಖ್ಯಮಂತ್ರಿ ಇಂದು ರಾತ್ರಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿಚುಂಚನಗಿರಿ ಮಠದ ಶಂಕುಸ್ಥಾಪನೆಗಾಗಿ ಸಿಎಂ 9 ದಿನ ಪ್ರವಾಸ ಕೈಗೊಳ್ಳುತ್ತಿದ್ದು, ಹೀಗಾಗಿ ಸಿಎಂ ಅವರು ಸ್ವಲ್ಪ ದಿನ ರಾಜ್ಯದಲ್ಲಿ ಇರಲ್ಲ.

ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಸಿಎಂ, ಆದಿಚುಂಚನಗಿರಿಯ ಶ್ರೀಗಳು ನ್ಯೂಜೆರ್ಸಿಯಲ್ಲಿ ಮಠವೊಂದನ್ನ ಕಟ್ಟಿಸುತ್ತಿದ್ದಾರೆ. ಅದರ ಶಂಕು ಸ್ಥಾಪನೆಗಾಗಿ ನಾನು ಬರಲೇಬೇಕೆಂದು ಶ್ರೀಗಳು ಒತ್ತಾಯ ಮಾಡುತ್ತಿದ್ದಾರೆ. ನಾನೇನೂ ಸರ್ಕಾರದ ವೆಚ್ಚದಲ್ಲಿ ಹೋಗುತ್ತಿಲ್ಲ. ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

CM 5

ಬೀದರ್‍ನ ಬಸವಕಲ್ಯಾಣದ ಉಜಳಂಬದಲ್ಲಿ ಮುಖ್ಯಮಂತ್ರಿಗಳು ತಮ್ಮ ಗ್ರಾಮ ವಾಸ್ತವ್ಯ ಮುಗಿಸಿದ್ದಾರೆ. ಗುರುವಾರ ರಾತ್ರಿ 9 ಗಂಟೆವರೆಗೂ ಜನತಾ ದರ್ಶನ ನಡೆಸಿದ ಸಿಎಂ, 4 ಸಾವಿರಕ್ಕೂ ಹೆಚ್ಚು ಅಹವಾಲುಗಳನ್ನು ಸ್ವೀಕರಿಸಿದರು. ಇಂದು ಬೀದರ್ ವಾಯುನೆಲೆಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣಿಸಲಿದ್ದು, ಮಧ್ಯಾಹ್ನ 12.30ಕ್ಕೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಸಾಧಕ-ಬಾಧಕ ಕುರಿತು ವರದಿ ನೀಡಲು ಸಮಿತಿ ರಚಿಸುವ ಸಾಧ್ಯತೆ ಇದೆ. ಮಳೆಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಈ ನಡ್ವೆ ಇಂದು ರಾತ್ರಿ ಸಿಎಂ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ.

CM 1 3

Share This Article
Leave a Comment

Leave a Reply

Your email address will not be published. Required fields are marked *