ಬೀದರ್: ಮುಖ್ಯಮಂತ್ರಿ ಇಂದು ರಾತ್ರಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿಚುಂಚನಗಿರಿ ಮಠದ ಶಂಕುಸ್ಥಾಪನೆಗಾಗಿ ಸಿಎಂ 9 ದಿನ ಪ್ರವಾಸ ಕೈಗೊಳ್ಳುತ್ತಿದ್ದು, ಹೀಗಾಗಿ ಸಿಎಂ ಅವರು ಸ್ವಲ್ಪ ದಿನ ರಾಜ್ಯದಲ್ಲಿ ಇರಲ್ಲ.
ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಸಿಎಂ, ಆದಿಚುಂಚನಗಿರಿಯ ಶ್ರೀಗಳು ನ್ಯೂಜೆರ್ಸಿಯಲ್ಲಿ ಮಠವೊಂದನ್ನ ಕಟ್ಟಿಸುತ್ತಿದ್ದಾರೆ. ಅದರ ಶಂಕು ಸ್ಥಾಪನೆಗಾಗಿ ನಾನು ಬರಲೇಬೇಕೆಂದು ಶ್ರೀಗಳು ಒತ್ತಾಯ ಮಾಡುತ್ತಿದ್ದಾರೆ. ನಾನೇನೂ ಸರ್ಕಾರದ ವೆಚ್ಚದಲ್ಲಿ ಹೋಗುತ್ತಿಲ್ಲ. ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
Advertisement
Advertisement
ಬೀದರ್‍ನ ಬಸವಕಲ್ಯಾಣದ ಉಜಳಂಬದಲ್ಲಿ ಮುಖ್ಯಮಂತ್ರಿಗಳು ತಮ್ಮ ಗ್ರಾಮ ವಾಸ್ತವ್ಯ ಮುಗಿಸಿದ್ದಾರೆ. ಗುರುವಾರ ರಾತ್ರಿ 9 ಗಂಟೆವರೆಗೂ ಜನತಾ ದರ್ಶನ ನಡೆಸಿದ ಸಿಎಂ, 4 ಸಾವಿರಕ್ಕೂ ಹೆಚ್ಚು ಅಹವಾಲುಗಳನ್ನು ಸ್ವೀಕರಿಸಿದರು. ಇಂದು ಬೀದರ್ ವಾಯುನೆಲೆಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣಿಸಲಿದ್ದು, ಮಧ್ಯಾಹ್ನ 12.30ಕ್ಕೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
Advertisement
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಸಾಧಕ-ಬಾಧಕ ಕುರಿತು ವರದಿ ನೀಡಲು ಸಮಿತಿ ರಚಿಸುವ ಸಾಧ್ಯತೆ ಇದೆ. ಮಳೆಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಈ ನಡ್ವೆ ಇಂದು ರಾತ್ರಿ ಸಿಎಂ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ.