ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಒಟ್ಟು 1013 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ಒಟ್ಟು 6 ಲಕ್ಷದ 73 ಸಾವಿರದ 606 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರಲ್ಲಿ 3,38,868 ವಿದ್ಯಾರ್ಥಿಗಳು ಹಾಗೂ 3,34,738 ವಿದ್ಯಾರ್ಥಿನಿಯರಿದ್ದಾರೆ. ಈ ಬಾರಿಯ ಪರೀಕ್ಷೆಗೆ ಭಾರೀ ಭದ್ರತೆ ನಿಯೋಜಿಸಲಾಗಿದ್ದು, ಪೇಪರ್ ಲೀಕ್ ಆಗದಂತೆ ಪಿಯು ಬೋರ್ಡ್ ಎಚ್ಚರಿಕೆ ವಹಿಸಿದೆ.
Advertisement
ಪರೀಕ್ಷಾ ಕೇಂದ್ರಗಳಿಗೆ ಸ್ಮಾರ್ಟ್ ಫೋನ್, ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗಲು ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಸೂಚಿಸಲಾಗಿದೆ.
Advertisement
Advertisement
ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಸಲಾಗಿದೆ. ಇತ್ತ ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ ಬಸ್‍ಗಳಲ್ಲಿ ಉಚಿತ ಸಂಚಾರದ ಅವಕಾಶವೂ ಸಿಗಲಿದೆ. ಮೊದಲ ದಿನವಾದ ಇಂದು ಅರ್ಥಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 18ರವರೆಗೆ ಎಕ್ಸಾಂ ನಡೆಯಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv