ಬೀದರ್: ದೇಶದ್ರೋಹದ ಆರೋಪ ಎದುರಿಸುತ್ತಿರುವ ಶಾಹೀನ್ ಶಿಕ್ಷಣ ಸಂಸ್ಥೆಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸಿದ್ದರಾಮಯ್ಯರ ಈ ಭೇಟಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಚರ್ಚೆಗೆ ಕಾರಣವಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಂದ ನಾಟಕ ಮಾಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಅವಮಾನ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದರಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನ್ಯೂಟೌನ್ ಠಾಣೆಯಲ್ಲಿ ಜನವರಿ 26ರಂದು ದೂರು ದಾಖಲಿಸಿದ್ದರು. ಆ ಬಳಿಕ ಶಾಲೆಯ ಮುಖ್ಯ ಶಿಕ್ಷಕಿ ಫರಿನಾಭಾನು ಹಾಗೂ ನಾಟಕ ಮಾಡಿದ ವಿದ್ಯಾರ್ಥಿನಿ ತಾಯಿ ನಶೀಮಾ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಇದನ್ನೂ ಓದಿ: ಪೌರತ್ವ ವಿರೋಧಿ ನಾಟಕದಲ್ಲಿ ಮೋದಿಗೆ ಅವಮಾನ- ಸಂಸ್ಥೆ ಕ್ಷಮೆ
Advertisement
Advertisement
ಈ ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದಿದ್ದು, ಹಲವಾರು ನಾಯಕರು ಶಾಹೀನ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಶಾಹೀನ್ ಶಿಕ್ಷಣ ಸಂಸ್ಥೆ ಗೆ ಭೇಟಿ ನೀಡಿ ನಾಟಕ ಮಾಡಿದ ವಿದ್ಯಾರ್ಥಿನಿಗೆ ಸಾಂತ್ವನ ಹೇಳಲಿದ್ದಾರೆ.
Advertisement
Advertisement
ವಿಶೇಷ ವಿಮಾನ ಮೂಲಕ ಮಧ್ಯಾಹ್ನ 1 ಗಂಟೆಗೆ ಬೀದರ್ ಏರಬೇಸ್‍ಗೆ ಆಗಮಿಸಿ ನೇರವಾಗಿ ಶಾಹೀನ್ ಶಿಕ್ಷಣ ಸಂಸ್ಥೆಗೆ ಸಿದ್ದರಾಮಯ್ಯ ತೆರಳಿದ್ದಾರೆ. ನಂತರ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸುದ್ದಿಗೋಷ್ಠಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರಾದ ರಾಜಶೇಖರ್ ಪಾಟೀಲ್, ಬಿ.ನಾರಾಯಣ್ ರಾವ್, ರಹೀಂ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ.