ಬೆಂಗಳೂರು: ಈ ರಾಜಕೀಯ ಜಂಜಾಟದ ನಡುವೆ ರೆಬೆಲ್ ಶಾಸಕ ರೋಷನ್ ಬೇಗ್‍ಗೆ ಐಎಂಎ ಕಂಟಕ ಎದುರಾಗಿದೆ. ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ರೋಷನ್ ಬೇಗ್ ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಐಎಂಎ ವಂಚನೆ ಬಳಿಕ ಬಿಡುಗಡೆಯಾದ ಆಡಿಯೋದಲ್ಲಿ ಮನ್ಸೂರ್ ಖಾನ್, ರೋಷನ್ ಬೇಗ್ ಹೆಸರು ಪ್ರಸ್ತಾಪ ಆಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ರೋಷನ್ ಬೇಗ್‍ಗೆ ಎಸ್‍ಐಟಿ ನೊಟೀಸ್ ನೀಡಿತ್ತು. ಆದರೆ, ಜುಲೈ 11ರಂದು ರೋಷನ್ ಬೇಗ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ಎಸ್‍ಐಟಿ ಮತ್ತೊಮ್ಮೆ ನೊಟೀಸ್ ಜಾರಿ ಮಾಡಿತ್ತು. ಇಂದು ರೋಷನ್ ಬೇಗ್ ವಿಚಾರಣೆಗೆ ಹಾಜರಾದರೆ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.
Advertisement
Advertisement
ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ನಡುವೆ ಅಮಾಯಕರಿಗೆ ಮೊಸ ಮಾಡಿದ ಬಹುಕೋಟಿ ಹಗರಣದ ಸುದ್ದಿ ಕಡಿಮೆಯಾಗಿದೆ. ಆದರೆ ಎಸ್‍ಐಟಿ ಮಾತ್ರ ನಮಗೂ ರಾಜಕೀಯ ವಿಷಯಕ್ಕೂ ಸಂಬಂಧವಿಲ್ಲ ಎಂದು ವಿಚಾರಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ಜಮೀರ್ ಅಹ್ಮದ್ ಅವರನ್ನ ಇಡಿ ವಿಚಾರಣೆ ನಡೆಸಿತ್ತು. ಈಗ ರೋಷನ್ ಬೇಗ್ ಸರದಿಯಾಗಿದೆ.