ನಿರ್ಭಯಾ ಹಂತಕರಿಗೆ ಗಲ್ಲು- ಆಶಾದೇವಿ ಮೊದಲ ಪ್ರತಿಕ್ರಿಯೆ

Public TV
1 Min Read
Nirbhaya Mother Asha Devi 1

ನವದೆಹಲಿ: ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಹಂತಕರಿಗೆ ಗಲ್ಲು ಆಗುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಆಶಾದೇವಿ, ಸರ್ಕಾರ, ರಾಷ್ಟ್ರಪತಿ ಮತ್ತು ದೇಶದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಅಪರಾಧಿಗಳು ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮೂರು ಬಾರಿ ಡೆತ್ ವಾರೆಂಟ್ ಮುಂದೂಡಿಕೆಯಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿತ್ತು. ಇಂದು ಏಕಕಾಲದಲ್ಲಿ ನಾಲ್ವರಿಗೂ ಗಲ್ಲಿಗೆ ಹಾಕಿದ್ದಾರೆ ಎಂದು ಹೇಳಿದರು.

ಹಂತಕರ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾಗೊಳ್ಳುತ್ತಿದ್ದ ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಾಯಿ ಆಶಾ ದೇವಿ, ಜೀತೇಂದ್ರ ಮತ್ತು ಸೀಮಾಜೀ ವಕೀಲಿ ವೃತ್ತಿ ಜೊತೆ ತಮ್ಮ ಕೆಲಸ ಮಾಡಿದರು. ನಮ್ಮ ನ್ಯಾಯ ಸಿಗಲಿದೆ ಎಂಬ ಭರವಸೆಯನ್ನು ನೀಡಿದ್ದರು. ಇಂದು ಕೊನೆಗೂ ನಮಗೆ ನ್ಯಾಯ ಸಿಕ್ಕಿದೆ ಎಂದರು.

ನಿರ್ಭಯಾ ಹಂತಕರು ದೆಹಲಿ ಹೈಕೋರ್ಟ್ ತಮ್ಮ ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮಧ್ಯರಾತ್ರಿ ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *