ಚಿಕ್ಕೋಡಿ/ಬೆಳಗಾವಿ: ಆಗತಾನೆ ಹುಟ್ಟಿರುವ ಹೆಣ್ಣು ಹಸುಗೂಸನ್ನ ಶೌಚಾಲಯದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ನಡೆದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ಆಗತಾನೇ ಹುಟ್ಟಿದ್ದ ಕಂದಮ್ಮನನ್ಮು ಯಕ್ಕಂಚಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ಬಿಟ್ಟು ತಾಯಿ ಪರಾರಿಯಾಗಿದ್ದಾಳೆ. ಶನಿವಾರ ಮಧ್ಯಾಹ್ನ ಶಾಲೆ ರಜೆಯಿತ್ತು. ಹೀಗಾಗಿ ಮಧ್ಯಾಹ್ನ ನಂತರ ಶಾಲೆಯ ಶೌಚಾಲಯದಲ್ಲಿ ಹಸುಗೂಸನ್ನ ಬಿಟ್ಟು ಹೋಗಲಾಗಿದೆ.
Advertisement
Advertisement
ಮಗು ಅಳುವಿನ ಶಬ್ದ ಕೇಳಿ ಗ್ರಾಮಸ್ಥರು ಹಾಗೂ ಅಂಗನವಾಡಿ ಕಾರ್ಯಕರ್ತರು ಸ್ಥಳಕ್ಕೆ ಹೋಗಿ ನೋಡಿದಾಗ ಹಸುಗೂಸು ಇರುವುದು ಪತ್ತೆಯಾಗಿದೆ. ತಕ್ಷಣ ಮಗುವನ್ನು ರಕ್ಷಣೆ ಮಾಡಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನವಜಾತ ಶಿಶು ಬಿಟ್ಟು ಹೋದ ತಾಯಿಗೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.
Advertisement
ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಹಸುಗೂಸನ್ನ ಬಿಟ್ಟು ಹೋಗಿರುವ ಶಂಕೆಯನ್ನ ವ್ಯಕ್ತವಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಮತ್ತು ಅಥಣಿ ಸಿಡಿಪಿಓ ಎ.ಬಿ.ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆಶಾ ಕಾರ್ಯಕರ್ತೆಯರ ಮೂಲಕ ಹಸುಗೂಸನ್ನ ಎಸೆದವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.