– ಕೋಲಾರ, ಯಶವಂತಪುರ ಬಳಿಕ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಘಟನೆ
ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನ ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ (Toilet Cleaning) ಮಾಡಿಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಹೌದು ಶಾಲೆಯ ಆವರಣದಲ್ಲಿರುವ ಶೌಚಾಲಯವನ್ನ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ (Head Master) ರೇಣುಕಮ್ಮ ವಿದ್ಯಾರ್ಥಿನಿಯರಿಂದ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ.
Advertisement
Advertisement
ಶೌಚಾಲಯವನ್ನು (Toilet) ಮಕ್ಕಳಿಂದ ಸ್ವಚ್ಛಗೊಳಿಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಶಿಡ್ಲಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಪಂಚಾಯಿತಿ EO ಮುನಿರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಗೌಪ್ಯ ಹೇಳಿಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜನವರಿ ತಿಂಗಳ ಹುಂಡಿ ಎಣಿಕೆ- ರಾಯರ ಮಠದಲ್ಲಿ 4 ಕೋಟಿ 15 ಲಕ್ಷ ರೂ. ಸಂಗ್ರಹ
Advertisement
Advertisement
ಈ ವೇಳೆ ಮಕ್ಕಳ ಪೋಷಕರು ಶಾಲಾ ಮುಖ್ಯ ಶಿಕ್ಷಕಿ ರೇಣುಕಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಸಿದ್ದು, ಮುಖ್ಯ ಶಿಕ್ಷಕಿಯ ವಿರುದ್ಧ ತಿರುಗಿಬಿದ್ದಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು ಮುಖ್ಯ ಶಿಕ್ಷಕಿ ರೇಣುಕಮ್ಮ ಅವರನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು
ಇತ್ತೀಚೆಗೆ ಬೆಂಗ್ಳೂರು ಯಶವಂತಪುರದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲೂ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕಿಯನ್ನ ಪೊಲೀಸರು ಬಂಧಿಸಿದ್ದರು.