ಕೋಲಾರ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ (Toilet Clean) ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆಯಂತೆ 5 ಜನ ಆರೋಪಿಗಳನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ.
ಕೋಲಾರ (Kolar) ಜಿಲ್ಲೆಯ ಮಾಲೂರು ತಾಲೂಕು ಯಲವಳ್ಳಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಇದೇ ತಿಂಗಳ 17ರಂದು ಮಲಗುಂಡಿ ಸ್ವಚ್ಛಗೊಳಿಸಿ, ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗಿತ್ತು. ಈ ಘಟನೆ ಬೆಳಕಿಗೆ ಬಂದ ಬಳಿಕ ಎಚ್ಚೆತ್ತ ಅಧಿಕಾರಿಗಳು ಎಲ್ಲಾ ಶಿಕ್ಷಕರು, ಸಿಬ್ಬಂದಿಯನ್ನು ವರ್ಗಾವಣೆ ಮಾಡಿ, 5 ಜನರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಇದನ್ನೂ ಓದಿ: ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಲೂಟಿ- ಆರೋಪಿ ಅಂದರ್
Advertisement
Advertisement
ಈ ಹಿಂದೆ ಪ್ರಾಂಶುಪಾಲೆ ಭಾರತಮ್ಮ, ಚಿತ್ರಕಲಾ ಶಿಕ್ಷಕ ಮುನಿಯಪ್ಪ, ಸಹ ಶಿಕ್ಷಕ ಅಭಿಷೇಕ್‌ನನ್ನು ಬಂಧಿಸಲಾಗಿತ್ತು. ಇಂದು ವಸತಿ ಶಾಲೆಯ ವಾರ್ಡನ್ ಮಂಜುನಾಥ್ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕಲಾವತಿ ಎಂಬವರನ್ನು ಬಂಧಿಸಲಾಗಿದೆ. ವಸತಿ ಶಾಲೆಯ ವಿದ್ಯಾರ್ಥಿಗಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಹಿನ್ನೆಲೆ 5 ಜನರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಹಾಗೂ ಸಹಾಯಕ ನಿರ್ದೇಶಕ ಶಿವಕುಮಾರ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ವ್ಯಕ್ತಿಗೆ ಇರಿದಿದ್ದ ಚಾಕುವಿನಿಂದ್ಲೇ ಪೊಲೀಸರ ಮೇಲೆ ಹಲ್ಲೆಗೆ ಯತ್ನ- ರೌಡಿಶೀಟರ್ ಕಾಲಿಗೆ ಗುಂಡೇಟು
Advertisement
Advertisement
ಪೋಕ್ಸೊ, ಜಾತಿ ನಿಂದನೆ ಹಾಗು ಮಲ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿ ಸ್ವಚ್ಛಗೊಳಿಸಿದ ಹಿನ್ನೆಲೆ ಮೂರು ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಅದರಂತೆ 5 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಸದ್ಯ ವಾರ್ಡನ್ (Wraden) ಮಂಜುನಾಥ್ ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ