CrimeLatestLeading NewsMain PostNational

ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಥಳಿತ – ಇಬ್ಬರು ಅರೆಸ್ಟ್

ಲಕ್ನೋ: ಕಳ್ಳತನ ಆರೋಪದ ಮೇಲೆ ದಲಿತ ಯುವಕನೊಬ್ಬನನ್ನು (Dalit Boy) ಥಳಿಸಿರುವ ಅಮಾನವೀಯ ಘಟನೆ ಉತ್ತರಪ್ರದೇಶದ (Uttar Pradesh) ಬ್ರಹ್ರೈಚ್‌ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಥಳಿತ - ಇಬ್ಬರು ಅರೆಸ್ಟ್

ಕಳ್ಳತನದ ಆರೋಪದ ಮೇಲೆ ದಲಿತ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಅಷ್ಟೇ ಅಲ್ಲದೇ ಮುಖಕ್ಕೆ ಮಸಿ ಬಳಿದು ಗ್ರಾಮದಲ್ಲಿ ಸುತ್ತಾಡಿಸಿದ್ದಾರೆ. ಅರ್ಧ ಮೀಸೆ ಕತ್ತರಿಸಿ ವೀಡಿಯೋ ಮಾಡಿದ್ದಾರೆ. ಸದ್ಯ ಈ ದೃಶ್ಯ ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: Made In India `ಅಗ್ನಿ ಪ್ರೈಮ್‌ʼ ಕ್ಷಿಪಣಿ ಪರೀಕ್ಷೆ ಯಶಸ್ವಿ- ದಾಳಿ ಸಾಮರ್ಥ್ಯ ಎಷ್ಟು?

ಬಹ್ರೈಚ್‌ನ ಹಾರ್ಡಿ ಪೊಲೀಸ್ ಠಾಣಾ (Police Station) ವ್ಯಾಪ್ತಿಯ ಹಿಂದೂ ಸಿಂಗ್ ಗ್ರಾಮದ ಮಜ್ರಾ ಬರ್ಕತಾನ್‌ನಲ್ಲಿ ಘಟನೆ ನಡೆದಿದೆ. ದಲಿತ ಯುವಕನೊಬ್ಬ ಶಾಲೆಯ ಶೌಚಾಲಯದ ಸೀಟನ್ನು ಕದ್ದಿದ್ದು, ಕೆಲವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದನ್ನು ಕಂಡ ಸ್ಥಳೀಯರು ಸ್ಥಳದಲ್ಲೇ ಶಿಕ್ಷೆ ವಿಧಿಸಲು ಮುಂದಾಗಿ, ಮಾರಣಾಂತಿಂಕ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ (FIR) ದಾಖಲಿಸಿ ಬಂಧಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button