ಮಡಿಕೇರಿ: ಟೋಕಿಯೋ ಒಲಿಂಪಿಕ್ಸ್ ಹಾಕಿಯಲ್ಲಿ ಭಾರತ ಮಹಿಳಾ ತಂಡದ ಅಪ್ರತಿಮ ಸಾಧನೆಗೆ ಕಾರಣಕರ್ತರಾದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾದ ಕೊಡಗಿನ ಕಂಬಿಬಾಣೆಯ ಅಂಕಿತಾ ಸುರೇಶ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸನ್ಮಾನಿಸಿ, 10 ಲಕ್ಷ ರೂ. ಪುರಸ್ಕಾರ ನೀಡಿ ಗೌರವಿಸಿದ್ದಾರೆ.
Advertisement
ಅಂಕಿತಾ ಅವರಿಗೆ 10 ಲಕ್ಷ ರೂ.ಗಳ ಕೊಡುಗೆಯನ್ನು ಯೋಗಿ ಆದಿತ್ಯನಾಥ್ ನೀಡಿ ಪುರಸ್ಕರಿಸಿದ ಬಳಿಕ ಒಡಿಶಾದ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಕೂಡ ಅಂಕಿತಾ ಸುರೇಶ್ ಹಾಗೂ ಭಾರತೀಯ ಮಹಿಳಾ ಹಾಕಿ ತಂಡದ ಆಟಗಾರ್ತಿಯರನ್ನು ರಾಜ್ಯದ ಪರವಾಗಿ ಸನ್ಮಾನಿಸಿ ಗೌರವಿಸಿದರು. ಇದನ್ನೂ ಓದಿ: ಹಾಕಿಯಲ್ಲಿ ಸಾಧನೆ – ಕೊಡಗಿನಲ್ಲಿ ಅಂಕಿತಾ ಸುರೇಶ್‍ಗೆ ಅದ್ಧೂರಿ ಸ್ವಾಗತ
Advertisement
Advertisement
ಪ್ರೋತ್ಸಾಹ ಧನ ಕೊಡುಗೆ ಘೋಷಿಸಿದ ರಾಜ್ಯಪಾಲರು
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾಗಿದ್ದ ಅಂಕಿತಾ ಸುರೇಶ್ ಸೇರಿದಂತೆ ಕರ್ನಾಟಕದ ನಾಲ್ವರು ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ತಲಾ ಒಂದು ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಜೊತೆಗೆ ನಾಲ್ವರಿಗೆ ಶೀಘ್ರದಲ್ಲೇ ರಾಜ ಭವನದಲ್ಲಿ ಗೌರವ ಸನ್ಮಾನ ನೀಡುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್ ಹಾಕಿ ಕೋಚ್ ಅಂಕಿತಾರನ್ನು ಸನ್ಮಾನಿಸಿದ ಬೊಮ್ಮಾಯಿ
Advertisement