ಟೋಕಿಯೋ: ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
Suhas Yathiraj #IND was certainly the surprise package of the #Badminton men’s singles SL4 class!
He pushed No 1 seed Lucas Mazur #FRA all the way in a great final????
#Tokyo2020 #Paralympics @bwfmedia pic.twitter.com/9kl9N1Ey6V
— Paralympic Games (@Paralympics) September 5, 2021
Advertisement
ಬ್ಯಾಡ್ಮಿಂಟನ್ ಫೈನಲ್‍ನ SL4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು
Advertisement
Advertisement
ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.
Advertisement
???? Suhas wins #Silver #IND‘s Suhas Yathiraj won his nation’s 18th medal of the #Paralympics, after #FRA‘s Lucas Mazur mounted an incredible comeback to win the Men’s Singles SL4 final 15-21, 21-17, 21-15! ????#ParaBadminton #Tokyo2020 pic.twitter.com/aAOPMKj5Bm
— #Tokyo2020 for India (@Tokyo2020hi) September 5, 2021
ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.