ಮಂಗಳೂರು: ದಕ್ಷಿಣ ಕ್ನನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ (Surathkal Toll gate) ಬಳಿ ಇಂದು ಭಾರೀ ಹೈಡ್ರಾಮಾ ನಡೆಯುತ್ತಿದೆ.
Advertisement
ಸುರತ್ಕಲ್ ಅಕ್ರಮ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು. ಇತ್ತ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ (Mithun Rai) ಟೋಲ್ ಪ್ಲಾಜಾ ಮೇಲೇರಿದರು. ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು. ಇದನ್ನೂ ಓದಿ: ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್
Advertisement
Advertisement
ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು. ಬ್ಯಾರಿಕೇಡ್ ಕಿತ್ತೆಸೆದು, ಟೋಲ್‍ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್‍ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ.
Advertisement
ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್‍ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು