ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ (Radhika Merchant) ಮದುವೆ ಅದ್ಧೂರಿಯಾಗಿ ಜರುಗಿದೆ. ಇದೀಗ ಮದುವೆಯಲ್ಲಿ ಭಾಗಿಯಾದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಜೊತೆಗಿನ ಫೋಟೋ ಹಂಚಿಕೊಂಡು, ಈ ಕ್ಷಣವನ್ನು ಮರೆಯುವುದಿಲ್ಲ ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ (Namrata Shirodkar) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸುಧಾ ಮೂರ್ತಿ ಜೊತೆಗಿನ ಫೋಟೋ ಶೇರ್ ಮಾಡಿ, ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ. ನನ್ನ ಅಜ್ಜಿ, ಮತ್ತು ಈಗ ನನ್ನ ಪತಿ ಮತ್ತು ಮಗಳ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ವಿನಮ್ರಗೊಳಿಸಿತು. ಈ ನೆನಪುಗಳನ್ನು ಎಂದಿಗೂ ಸ್ಮರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ:‘ಬ್ಯಾಚುರಲ್ ಪಾರ್ಟಿ’ ಕಾಪಿರೈಟ್ ಕೇಸ್: ಕಾನೂನು ಹೋರಾಟ ಮಾಡುತ್ತೇನೆ ಎಂದ ರಕ್ಷಿತ್ ಶೆಟ್ಟಿ
View this post on Instagram
ಅನಂತ್ ಮತ್ತು ರಾಧಿಕಾ ಮದುವೆಗೆ ಸುಧಾ ಮೂರ್ತಿ (Sudha Murty) ಕೂಡ ಹಾಜರಿ ಹಾಕಿದ್ದರು. ಈ ವೇಳೆ, ಸುಧಾ ಮೂರ್ತಿ ಅವರನ್ನು ತೆಲುಗು ನಟ ಮಹೇಶ್ ಬಾಬು (Mahesh Babu) ಪತ್ನಿ ನಮ್ರತಾ ಶಿರೋಡ್ಕರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ನಟಿ ನಮ್ರತಾ ಸಂಭ್ರಮಿಸಿದ್ದಾರೆ. ಈ ಪೋಸ್ಟ್‌ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಅಂದಹಾಗೆ, ತೆಲುಗಿನ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ನಟಿ, ನಿರ್ಮಾಪಕಿ, ಮಾಡೆಲ್ ಆಗಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಚೋರ ಚಿತ್ತ ಚೋರ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಬಹುಭಾಷಾ ನಟಿಯಾಗಿ ಗಮನ ಸೆಳೆದಿದ್ದಾರೆ.